ಏಪ್ರಿಲ್ 6 ರಂದು ಶ್ರೀರಾಮ ನವಮಿ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಬಿಬಿಎಂಪಿ ಪಶುಪಾಲನಾ ವಿಭಾಗದ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದಾರೆ. ಆದಾಗ್ಯೂ, ಖಾಸಗಿ ಮಾರುಕಟ್ಟೆಗಳಲ್ಲಿ ಕೋಳಿ ಮತ್ತು ಮೀನು ಮಾರಾಟಕ್ಕೆ ನಿರ್ಬಂಧವಿಲ್ಲ. ಕಸಾಯಿಖಾನೆಗಳಲ್ಲಿ ಕತ್ತರಿಸದ ಪ್ರಾಣಿಗಳ ಮಾಂಸ ಮಾರಾಟವು ಮುಂದುವರಿಯುತ್ತದೆ.
ಬೆಂಗಳೂರು (ಏ.04): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ವತಿಯಿಂದ ಆದೇಶ ಹೊರಡಿಸಲಾಗಿದೆ.
ಭಾನುವಾರ ಏ.6ರಂದು ಹಿಂದೂ ಧಾರ್ಮಿಕ ಹಬ್ಬಗಳಲ್ಲಿ ಒಂದಾಗಿರುವ 'ಶ್ರೀರಾಮ ನವಮಿ ಹಬ್ಬ'ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧಪಟ್ಟ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ರವರು ತಿಳಿಸಿದ್ದಾರೆ.
ಪಾಲಿಕೆಯ ಕಸಾಯಿಖಾನೆಯಲ್ಲಿ ಮಾತ್ರ ಈ ಆದೇಶ ಅನ್ವಯವಾಗಲಿದ್ದು, ಖಾಸಗಿ ಮಾರುಕಟ್ಟೆಗಳಲ್ಲಿ ಕೋಳಿ, ಮೀನು ಸೇರಿದಂತೆ ಕಸಾಯಿಖಾನೆಗಳಲ್ಲಿ ಕತ್ತರಿಸದಿರುವ ಪ್ರಾಣಿಗಳ ಮಾಂಸ ಮಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.

