ಪಾಕಿಸ್ತಾನ ಪರ ಘೋಷಣೆ| ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದ ಆರೋಪಿಗಳ ವೈದ್ಯಕೀಯ ತಪಾಸಣೆ| ಬಿಗಿ ಪೊಲೀಸ್‌ ಭದ್ರತೆಯೊಂದಿಗೆ ಹಿಂಡಲಗಾ ಕಾರಾಗೃಹಕ್ಕೆ ರವಾನೆ| 

ಬೆಳಗಾವಿ(ಫೆ.28): ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮೂವರು ಆರೋಪಿಗಳ ವೈದ್ಯಕೀಯ ತಪಾಸಣೆಯನ್ನು ಗುರುವಾರ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮಾಡಲಾಯಿತು. 

ಬಳಿಕ ಅವರನ್ನು ಬಿಗಿ ಪೊಲೀಸ್‌ ಭದ್ರತೆಯೊಂದಿಗೆ ಮರಳಿ ಹಿಂಡಲಗಾ ಕಾರಾಗೃಹಕ್ಕೆ ರವಾನಿಸಲಾಯಿತು. ಆರೋಪಿಗಳಾದ ಅಮೀರ್‌ ಮೊಯಿನುದ್ದಿನ್‌, ಬಾಸಿತ್‌ ಆಸಿಫ್‌ ಸೋಫಿ ಮತ್ತು ತಾಲಿಬ್‌ ಮಾಜಿದ್‌ರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ವೈದ್ಯಕೀಯ ತಪಾಸಣೆಗೆ ಬಿಮ್ಸ್‌ಗೆ ಕರೆತಂದಿದ್ದರು.

'ಪಾಕಿಸ್ತಾನ್ ಜಿಂದಾಬಾದ್'ಎಂದ ಹುಬ್ಬಳ್ಳಿಯ KLE ವಿದ್ಯಾರ್ಥಿಗಳು ಅರೆಸ್ಟ್

ಈ ಮೂವರನ್ನು ಬಿಮ್ಸ್‌ ನಿರ್ದೇಶಕರ ಕೊಠಡಿಯಲ್ಲೇ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಇಬ್ಬರು ಸಿಪಿಐ ನೇತೃತ್ವದಲ್ಲಿ ಆರೋಪಿಗಳಿಗೆ ಭದ್ರತೆ ಒದಗಿಸಲಾಗಿತ್ತು. ಇತರೆ ಕೈದಿಗಳಾದರೆ ಬಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತದೆ. ಆದರೆ, ದೇಶದ್ರೋಹಿಗಳಿಗೆ ಬಿಮ್ಸ್‌ ನಿರ್ದೇಶಕರ ಕೊಠಡಿಯಲ್ಲೇ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಬಳಿಕ ಅವರನ್ನು ಮರಳಿ ಹಿಂಡಲಗಾ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.