ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಆಹ್ವಾನದ ಮೇರೆಗೆ ಶುಕ್ರವಾರ ರಾತ್ರಿ ಮಂಡ್ಯ ಜಿಲ್ಲೆಯ ಪಾಂಡವಪುರ ರೈಲು ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ದರ್ಶನ್‌ 

ಮಂಡ್ಯ(ಮೇ.20): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಶನಿವಾರ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ಚಡ್ಡಿ ಟೀ ಶರ್ಚ್‌ ಧರಿಸಿ ರೈಲಿನಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡುವ ಮೂಲಕ ಸರಳತೆ ಮೆರೆದಿದ್ದಾರೆ. 

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಆಹ್ವಾನದ ಮೇರೆಗೆ ಶುಕ್ರವಾರ ರಾತ್ರಿ ಪಾಂಡವಪುರ ರೈಲು ನಿಲ್ದಾಣದಿಂದ ದರ್ಶನ್‌ ಪ್ರಯಾಣ ಬೆಳೆಸಿದ್ದಾರೆ. 

ಮೇಲುಕೋಟೆ ಅಭಿವೃದ್ಧಿಗೆ ಪ್ರಾಧಿಕಾರ: ದರ್ಶನ್‌ ಪುಟ್ಟಣ್ಣಯ್ಯ

ಇಂದು(ಶನಿವಾರ) ಬೆಂಗಳೂರಿನಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಲಿದ್ದಾರೆ.