ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಲಾಭ ಪಡೆದು ಅನೇಕ ಕಡೆ ಮಹಿಳೆಯರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಕೆಲವು ಕಡೆ ಮಹಿಳೆಯರ ಗಂಡಂದಿರು ಅಧಿಕಾರ ಚಲಾಯಿಸುತ್ತಿದ್ದು, ಇದು ತರವಲ್ಲದ ನಡವಳಿಕೆಯಾಗಿದೆ ಎಂದು ಶಾಸಕ ತಿಪ್ಪಾರೆಡ್ಡಿ ಹೇಳಿದರು.
ಚಿತ್ರದುರ್ಗ (ಮಾ.9) : ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಲಾಭ ಪಡೆದು ಅನೇಕ ಕಡೆ ಮಹಿಳೆಯರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಕೆಲವು ಕಡೆ ಮಹಿಳೆಯರ ಗಂಡಂದಿರು ಅಧಿಕಾರ ಚಲಾಯಿಸುತ್ತಿದ್ದು, ಇದು ತರವಲ್ಲದ ನಡವಳಿಕೆಯಾಗಿದೆ ಎಂದು ಶಾಸಕ ತಿಪ್ಪಾರೆಡ್ಡಿ (MLA Tippareddy)ಹೇಳಿದರು.
ನಗರದ ತರಾಸು ರಂಗಮಂದಿರ(Ta ra su rangamanddira)ದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ(Karnataka State Commission for Women), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬುಧವಾರ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ತಮಗೆ ಲಭ್ಯವಾದ ರಾಜಕೀಯ ಅವಕಾಶವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಬೇಕೆಂದರು.
ದಾವಣಗೆರೆ: ದ್ವಿತೀಯ ಪಿಯು ಪರೀಕ್ಷೆ ಆರಂಭಕ್ಕೆ ಮುನ್ನಾ ದಿನವೇ ವಿದ್ಯಾರ್ಥಿನಿ ಆತ್ಮಹತ್ಯೆ!
ಲೋಕಸಭಾ ಹಾಗೂ ವಿಧಾನಸಭೆ ಚುನಾವಣೆಯಲ್ಲೂ ಕೂಡ ಮಹಿಳೆಯರಿಗೆ ಶೇ.33 ರಷ್ಟುಮೀಸಲಾತಿಗೆ ನೀಡಬೇಕು ಎಂಬ ಬೇಡಿಕೆ ಬಹುದಿನಗಳಿಂದ ಪ್ರಚಲಿತದಲ್ಲಿದೆ. ಈ ಬೇಡಿಕೆ ಇದುವರೆಗೂ ಈಡೇರಿಲ್ಲ. ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಿತಿಗತಿಗಳು ಬದಲಾಗಬಹುದು. ಪ್ರಜಾಪ್ರಭುತ್ವಕ್ಕೆ ಮಾದರಿ ಎನಿಸಿದ ಅಮೆರಿಕಾದ ದೇಶದ ಚುನಾವಣೆಯಲ್ಲಿ ಇದುವರೆಗೂ ಒಬ್ಬ ಮಹಿಳೆ ಅಧ್ಯಕ್ಷೆಯಾಗಿ ಆಯ್ಕೆಯಾಗಿಲ್ಲ. ಆದರೆ ಶ್ರೀಲಂಕಾ, ಭಾರತ, ಪಾಕಿಸ್ತಾನ, ಬಾಂಗ್ಲಾ ಸೇರಿದಂತೆ ಏಷ್ಯಾ ದೇಶಗಳಲ್ಲಿ ಮಹಿಳೆಯರು ಪ್ರಧಾನ ಮಂತ್ರಿಯಾಗಿ ಅಧಿಕಾರ ಅಲಂಕರಿ ಸಿದ್ದಾರೆ ಎಂದರು.
ಸರ್ಕಾರ ಮಹಿಳೆಯರು ಹಾಗೂ ಮಹಿಳಾ ಸಂಘಟನೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೇಟಿ ಬಚಾವೋ ಬೇಟಿ ಪಡಾವೋ ಎಂಬ ಯೋಜನೆ ಜಾರಿಗೆ ತಂದರು. ಜನನಕ್ಕೂ ಮುನ್ನವೇ ಹೆಣ್ಣು ಮಗುವಿನ ರಕ್ಷಣೆಗೆ ಕಾನೂನು ರೂಪಿಸಲಾಗಿದೆ. ಇದರ ಫಲವಾಗಿ ದೇಶದ ಲಿಂಗಾನುಪಾತದಲ್ಲಿ ಸ್ತ್ರೀಯರ ಪ್ರಮಾಣ ಹೆಚ್ಚಾಗಿದೆ. ಸರ್ಕಾರದ ಯೋಜನೆಗಳನ್ನು ಮಹಿಳಾ ಹೆಸರಿನಲ್ಲಿ ನೀಡಲಾಗುತ್ತದೆ ಎಂದು ತಿಪ್ಪಾರೆಡ್ಡಿ ಹೇಳಿದರು.
ಅಡುಗೆ ಮನೆಗೆ ಸೀಮತಗೊಳಿಸಬೇಡಿ:
ಜಿಲ್ಲಾಧಿಕಾರಿ ದಿವ್ಯಾಪ್ರಭು ಮಾತನಾಡಿ, ಮಹಿಳೆಯರಾಗಿ ಜನಿಸಲು ಪುಣ್ಯ ಮಾಡಬೇಕು. ಜನ್ಮನೀಡುವ ಶಕ್ತಿಯನ್ನು ಪ್ರಕೃತಿ ಮಹಿಳೆಯರಿಗೆ ನೀಡಿದೆ. ಮಹಿಳೆಯರು ಯಾವುದೇ ಸಂದರ್ಭ ಹಾಗೂ ಪರಿಸ್ಥಿತಿಗಳಿಗೆ ಹೊಂದಿಕೊಳ್ಳವ ಶಕ್ತಿಯನ್ನು ಹೊಂದಿದ್ದಾರೆ. ಮಹಿಳೆಯರನ್ನು ಅಡುಗೆ ಮನೆಗೆ ಸೀಮತಗೊಳಿಸಬಾರದು. ಅವರು ಇತರೆ ವಿಷಯಗಳಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಬೇಕು. ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಬೇಕು. ಸ್ವತಃ ನಾನು ಒಂಬತ್ತು ತಿಂಗಳ ಗರ್ಭಿಣಿ ಇದ್ದ ಸಂದರ್ಭದಲ್ಲಿ ಲೋಕಸೇವಾ ಆಯೋಗದ ಪರೀಕ್ಷೆ ಬರೆದು ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದೆ. ಸಾಧನೆ ಮಾಡಲು ಮಹಿಳೆಯರಿಗೆ ಯಾವುದು ಅಡ್ಡಿಯಾಗುವುದಿಲ್ಲ. ನಿರ್ಣಯ ತೆಗದುಕೊಳ್ಳುವ ಸಾಮಾರ್ಥ್ಯ ಮಹಿಳೆಯರಿಗೆ ಇದೆ. ಇದನ್ನು ಎಲ್ಲರೂ ಒಪ್ಪಬೇಕು ಎಂದರು.
ಗ್ರಾಪಂನಲ್ಲಿ ಚಾಲಕರಾಗಿ ಮಹಿಳೆಯರು:
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಮಾತನಾಡಿ, ಕೃಷಿಯಲ್ಲಿ ಮಹಿಳೆಯರ ಪಾತ್ರ ಅಗಾಧವಾದುದು. ಗ್ರಾಮೀಣ ಭಾಗದ ಶೇ.80ರಷ್ಟುಮಹಿಳೆಯರು ಕೃಷಿಯಲ್ಲಿ ಭಾಗಿಯಾಗಿದ್ದಾರೆ. ಕೃಷಿಯಲ್ಲಿನ ಕಠಿಣ ಕೆಲಸಗಳನ್ನು ಮಹಿಳೆಯರು ನಿರ್ವಹಿಸುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಕಸ ವಿಂಗಡಣೆಯ ಜವಾಬ್ದಾರಿ ನೀಡುವುದರ ಜೊತೆಗೆ ವಾಹನದ ಚಾಲಕರಾಗಿ ಕಾರ್ಯನಿರ್ವಹಿಸಲು ತರಬೇತಿ ನೀಡುತ್ತಿದೆ. 97 ಮಹಿಳೆಯರ ತರಬೇತಿ ಪೂರ್ಣಗೊಂಡಿ ದ್ದು, ಇನ್ನೂ 31 ಮಹಿಳೆಯರು ತರಬೇತಿ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 74 ಮಹಿಳೆಯರು ಕಸ ವಿಂಗಡಣೆಯ ವಾಹನದ ಚಾಲಕರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಈರುಳ್ಳಿ ಬೆಲೆ ಕುಸಿತ, ಗ್ರಾಹಕರಿಗೆ ಸಂತಸವಾದ್ರೆ ಕೋಟೆನಾಡಿನ ಅನ್ನದಾತ ಕಂಗಾಲು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಪ್ರಾಸ್ತಾವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಹಾಗೂ ಅಸಾಧಾರಣ ಸಾಧನೆ ಮಾಡಿದ ಜಿಲ್ಲೆಯ ಮಕ್ಕಳಿಗೆ ಸನ್ಮಾನಿಸಲಾಯಿತು. ಉತ್ತಮ ಸಾಧನೆ ತೋರಿದ ಗ್ರಾಮ ಪಂಚಾಯತಿ ಮಹಿಳಾ ಒಕ್ಕೂಟಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರ ನಾಮ ನಿರ್ದೇಶನ ಸದಸ್ಯೆ ರೇಖಾ, ಎನ್‌ಆರ್‌ಎಂಎಲ್ ಯೋಜನಾ ನಿರ್ದೇಶಕ ಕೆ.ಎನ್.ಮಹಾಂತೇಶಪ್ಪ, ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಕೊಲ್ಲಿ ಲಕ್ಷ್ಮೀ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಡಿ.ಕೆ.ಶೀಲಾ, ಬಾಲ ನ್ಯಾಯಮಂಡಳಿ ಸದಸ್ಯೆ ಸುಮನಾ ಅಂಗಡಿ ಸೇರಿದಂತೆ ಮತ್ತಿತರರು ಇದ್ದರು.
