ಬೆಂಗಳೂರು(ಫೆ.27): ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಭಾನುವಾರ ಫೆ.28ರಂದು ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಎಂ.ಜಿ.ರೋಡ್‌ ಮೆಟ್ರೋ ನಿಲ್ದಾಣದ ನಡುವೆ ಮೆಟ್ರೋ ಸೇವೆ ಇರುವುದಿಲ್ಲ.

ದುರಸ್ತಿ ಕಾಮಗಾರಿ ಮುಕ್ತಾಯಗೊಂಡ ಬಳಿಕ ಅಂದರೆ ಬೆಳಗ್ಗೆ 9ರಿಂದ ಈ ಮಾರ್ಗದಲ್ಲಿ ಮೆಟ್ರೋ ಓಡಾಟ ಪುನಾರಂಭಗೊಳ್ಳಲಿದೆ. ಉಳಿದಂತೆ ನೇರಳೆ ಮಾರ್ಗದ ಎಂ.ಜಿ.ರಸ್ತೆ ಮತ್ತು ಮೈಸೂರು ರಸ್ತೆ ಮಧ್ಯೆ ರೈಲು ಓಡಾಟ ಯಥಾ ಪ್ರಕಾರ ಇರಲಿದೆ. 

ಮೆಟ್ರೋಗೆ ಆಸ್ತಿ ತೆರಿಗೆ ಬದಲು ಸೇವಾ ಶುಲ್ಕ

ಹಸಿರು ಮಾರ್ಗದಲ್ಲಿಯೂ ರೈಲು ಓಡಾಟ ಎಂದಿನಂತೆಯೇ ಇರಲಿದೆ ಎಂದು ನಮ್ಮ ಮೆಟ್ರೋ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.