ಮಂಡ್ಯ(ಆ.21): ಮದ್ದೂರು ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನಂತರ ಹಾಲಿನ ಖರೀದಿ ಹೆಚ್ಚಳ ಮಾಡುವುದಾಗಿ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ ಭರವಸೆ ನೀಡಿದರು.

ತಾಲೂಕಿನ ಗೆಜ್ಜಲಗೆರೆ ಹಾಲು ಒಕ್ಕೂಟದ ಎದುರು ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಾಲು ಉತ್ಪಾದಕರನ್ನು ಉದ್ದೇಶಿಸಿ ಮಾತನಾಡಿದರು.

ಮಂಡ್ಯ: 700 ಎಕರೆ ಕೃಷಿಭೂಮಿಗೆ ನೀರು

ಹಾಲಿನ ಖರೀದಿ ದರ ಹೆಚ್ಚಳ ಕುರಿತಂತೆ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕು. ನಿರ್ದೆಶಕರ ಚುನಾವಣೆ ನಿಗದಿಯಾದ ಹಿನ್ನಲೆಯಲ್ಲಿ ಹಾಲಿನ ಖರೀದಿ ದರವನ್ನು ಹೆಚ್ಚಳ ಮಾಡುವ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಚುನಾವಣೆ ಮುಗಿದ ಬಳಿಕ ಯಾವುದೇ ವಿಳಂಬ ಮಾಡದೆ ದರ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ