Asianet Suvarna News Asianet Suvarna News

ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿವಿಗೆ ಸಚಿವ ಆನಂದ ಸಿಂಗ್‌ ಭೇಟಿ

ವಿಶ್ವವಿದ್ಯಾಲಯದಲ್ಲಿ ನಡೆದಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಆನಂದ ಸಿಂಗ್‌| ವಿಶ್ವವಿದ್ಯಾಲಯದ ಮುಂಭಾಗದಲ್ಲಿರುವ 75 ಎಕರೆ ಜಾಗವನ್ನು ವಿಶ್ವವಿದ್ಯಾಲಯದ ಸುಪರ್ದಿಗೆ ವಹಿಸಬೇಕೆಂಬ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಂಗ್‌| 

Minister Anand Singh Visit Shri Krishnadevaraya University in Ballarigrg
Author
Bengaluru, First Published Oct 1, 2020, 3:22 PM IST
  • Facebook
  • Twitter
  • Whatsapp

ಬಳ್ಳಾರಿ(ಅ.01): ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರು ಬುಧವಾರ ಭೇಟಿ ನೀಡಿದ್ದರು. 

ಒಂದು ಗಂಟೆಗೂ ಹೆಚ್ಚು ಕಾಲ ವಿಶ್ವವಿದ್ಯಾಲಯದಲ್ಲಿದ್ದ ಸಚಿವರು, ವಿಶ್ವವಿದ್ಯಾಲಯದಲ್ಲಿ ನಡೆದಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶ್ವವಿದ್ಯಾಲಯದ ಮುಂಭಾಗದಲ್ಲಿರುವ 75 ಎಕರೆ ಜಾಗವನ್ನು ವಿಶ್ವವಿದ್ಯಾಲಯದ ಸುಪರ್ದಿಗೆ ವಹಿಸಬೇಕೆಂಬ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು, ಕಂದಾಯ ಇಲಾಖೆ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಬ್ಯಾಂಕ್‌ ವ್ಯವಸ್ಥಾಪಕರು ಮತ್ತು ವಿವಿಯ ಕುಲಪತಿಗಳನ್ನು ಒಳಗೊಂಡ ಸಭೆಯನ್ನು ಶೀಘ್ರವೇ ಕರೆದು ಈ ಜಾಗವನ್ನು ವಿಶ್ವವಿದ್ಯಾಲಯಕ್ಕೆ ಹಸ್ತಾಂತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗಾಗಿ ಮತ್ತು ಮೂಲಸೌಕರ್ಯ ಹೆಚ್ಚಿಸಲು ಅವಶ್ಯಕವಿರುವ ಅನುದಾನವನ್ನು ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್‌) ಯೋಜನೆಯಡಿ ಒದಗಿಸಬೇಕೆಂದು ವಿಶ್ವವಿದ್ಯಾಲಯದ ಕುಲಪತಿ ಪೊ›. ಸಿದ್ದು ಅಲಗೂರು ಅವರು ಮನವಿ ಪತ್ರ ನೀಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉನ್ನತ ಶಿಕ್ಷಣ ಬಲಪಡಿಸಲು ಸಕಲ ಸಹಕಾರ ನೀಡುವುದಾಗಿ ಸಚಿವರು ಹೇಳಿದರು.

ವಿಶ್ವವಿದ್ಯಾಲಯದ ಕುಲಸಚಿವರಾದ ಪೊ›. ಬಿ.ಕೆ. ತುಳಸಿಮಾಲ, ಹಣಕಾಸು ಅಧಿಕಾರಿಗಳಾದ ಡಾ. ಕೆ.ಸಿ. ಪ್ರಶಾಂತ್‌ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಟಿ. ಮುರಳೀಧರ್‌ ಇದ್ದರು.
 

Follow Us:
Download App:
  • android
  • ios