ಮೈಸೂರು(ಅ.08): ಕೋವಿಡ್‌-19 ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ದಸರಾ ಆಚರಿಸುವ ಸಂಬಂಧ ತಜ್ಞರ ತಂಡವನ್ನು ಮೈಸೂರಿಗೆ ಕಳುಹಿಸಲಾಗುತ್ತಿದೆ. ಇವರು ವರದಿ ನೀಡಿದ 24 ಗಂಟೆಯೊಳಗೆ ಕ್ರಿಯಾ ಯೋಜನೆ ತಯಾರಿಸುವಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಾಡಹಬ್ಬ ದಸರಾ ಉತ್ಸವ ಆಚರಿಸುವ ಹಿನ್ನೆಲೆಯಲ್ಲಿ ಕೋವಿಡ್‌- 19 ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳ ಕುರಿತು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವವಿಖ್ಯಾತ ನಾಡಹಬ್ಬ ದಸರಾ ಉತ್ಸವವನ್ನು ನಡೆಸುವ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ ಎಂದರು.

ದಸರಾದಿಂದ ಕೊರೋನಾ ಹೆಚ್ಚಾದ್ರೆ ಜನರೇ ಕೇಸ್‌ ಹಾಕ್ತಾರೆ: ವಿಶ್ವನಾಥ್‌

ಈ ಸೂಚನೆಯಂತೆ ದಸರಾ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮೈಸೂರು ಹಾಗೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೊರೋನಾ ಪಾಸಿಟಿವ್‌ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಮನಗಂಡು ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.