*  ಕಾಂಗ್ರೆಸ್‌ ಪ್ರಣಾಳಿಕೆ ಕೇವಲ ಸುಳ್ಳಿನ ಕಂತೆ*  ಪ್ರಣಾಳಿಕೆಗೆ ತಕ್ಕಂತೆ ನಡೆದುಕೊಳ್ಳುವ ಏಕೈಕ ಪಕ್ಷ ಬಿಜೆಪಿ *  ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ  

ಕಲಬುರಗಿ(ಸೆ.01): ರಾಜ್ಯದಲ್ಲಿ ನಡೆಯುತ್ತಿರುವ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‌ ಪ್ರಣಾಳಿಕೆ ಕೇವಲ ಸುಳ್ಳಿನ ಕಂತೆಯಾಗಿದೆ. ಕಾಂಗ್ರೆಸ್‌ ಹೇಳೋದೊಂದು, ಮಾಡೋದೊಂದು ಎಂದು ಸಚಿವ ಶ್ರೀರಾಮುಲು ಟೀಕಿಸಿದ್ದಾರೆ.

ಅವರು, ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ನಿಮಿತ್ತ ವಾರ್ಡ್‌ 11, 23ರಲ್ಲಿ ಬಿಜೆಪಿ ಅಭ್ಯರ್ಥಿ ದಿಗಂಬರ ಮಾಗಣಗೇರಿ ಸೇರಿದಂತೆ ಹಲವರ ಪರ ಪ್ರಚಾರ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಿಂದೂಗಳು ಅಲ್ಪಸಂಖ್ಯಾತರಾದರೆ ಗಾಡಾಂಧಕಾರ: ಸಿ.ಟಿ. ರವಿ

ಬೆಳಗಾವಿ, ಹುಬ್ಬಳ್ಳಿ - ಧಾರವಾಡ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಕಾಂಗ್ರೆಸ್‌ ಪಕ್ಷ ಹೇಳುವುದೊಂದು, ಮಾಡುವುದೊಂದು. ಹೀಗೆ ಮಾಡುತ್ತಾ, ಜನರನ್ನು ವೋಟ್‌ ಬ್ಯಾಂಕ್‌ಗಾಗಿ ಬಳಸಿಕೊಂಡಿದೆ. ಹೀಗಾಗಿ ಪ್ರಣಾಳಿಕೆಗೆ ತಕ್ಕಂತೆ ನಡೆದುಕೊಳ್ಳುವ ಏಕೈಕ ಪಕ್ಷ ಬಿಜೆಪಿ ಎಂದರು. ಈ ಸಂದರ್ಭದಲ್ಲಿ ಕ್ರೆಡೆಲ್‌ ಅಧ್ಯಕ್ಷ ಚಂದು ಪಾಟೀಲ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.