Asianet Suvarna News Asianet Suvarna News

ನಾಡ ಹಬ್ಬವಾಗಿ ಬಳ್ಳಾರಿ ಉತ್ಸವ ಶಾಶ್ವತವಾಗಿ ಆಚರಣೆ: ಸಚಿವ ಶ್ರೀರಾಮುಲು

ಮೊದಲ ಬಾರಿಗೆ ಆಯೋಜಿಸಲಾಗಿರುವ ಬಳ್ಳಾರಿ ಉತ್ಸವವನ್ನು ನಾಡ ಹಬ್ಬವಾಗಿ ಶಾಶ್ವತವಾಗಿ ಆಯೋಜಿಸಲಾಗುವುದು ಎಂದು ಸಂತಸದಿಂದ ಹೇಳಿದ ಶ್ರೀರಾಮುಲು.

Minister B Sriramulu Talks Over Ballari Utsav grg
Author
First Published Jan 22, 2023, 1:30 AM IST

ವರದಿ: ನರಸಿಂಹ ಮೂರ್ತಿ ಕುಲಕರ್ಣಿ

ಬಳ್ಳಾರಿ(ಜ.22): ಕಲರ್ ಫುಲ್ ಲೈಟಿಂಗ್ ಬೆಳಕಿನಲ್ಲಿ ಸಾವಿರಾರು ಜನರ ಹರ್ಷೋದ್ಘಾರದ ಮಧ್ಯೆ ಇದೇ ಮೊದಲ ಬಾರಿಗೆ ಬಳ್ಳಾರಿ ನಗರದ ಹೃದಯಭಾಗದ ಮುನ್ಸಿಪಲ್ ಮೈದಾನದಲ್ಲಿ ಬಳ್ಳಾರಿ ಉತ್ಸವಕ್ಕೆ ವಿದ್ಯುಕ್ತವಾಗಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು. ಉದ್ಘಾಟನೆ ಬಳಿಕ ಮಾತನಾಡಿದ ಶ್ರೀರಾಮುಲು, ಮೊದಲ ಬಾರಿಗೆ ಆಯೋಜಿಸಲಾಗಿರುವ ಬಳ್ಳಾರಿ ಉತ್ಸವವನ್ನು ನಾಡ ಹಬ್ಬವಾಗಿ ಶಾಶ್ವತವಾಗಿ ಆಯೋಜಿಸಲಾಗುವುದು ಎಂದು    ಸಂತಸದಿಂದ ಹೇಳಿದರು.

ಬಳ್ಳಾರಿ ಉತ್ಸವಕ್ಕೆ ನಗರ ಮದುವಣಗಿತ್ತಿಯಂತೆ‌ ಅಲಂಕೃತವಾಗಿದೆ. ಚಾಲನೆ ನೀಡಿರುವ ಉತ್ಸವದ ರಥವನ್ನು ಮುಂದಿನ ದಿನಗಳಲ್ಲಿಯೂ ಮುನ್ನಡೆಸಬೇಕು. 1998ರಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಎಂ.ಪಿ.ಪ್ರಕಾಶ್ ನೇತೃತ್ವದಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯ ಹಂಪಿ ಉತ್ಸವ ಆರಂಭಿಸಲಾಯಿತು. ಜಿಲ್ಲೆ ವಿಭಜನೆಯ ನಂತರ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಇರುವ ಸಂದರ್ಭದಲ್ಲಿ ಬಳ್ಳಾರಿ ಉತ್ಸವವನ್ನು ಪ್ರಾರಂಭಿಸಲಾಗಿದೆ. 

ರಾಜ್ಯದ ಅತಿದೊಡ್ಡ ಪುನೀತ್‌ ಪ್ರತಿಮೆ ಬಳ್ಳಾರಿಯಲ್ಲಿ ಅನಾವರಣ: ರಾಜ್‌ ಕುಮಾರ್‌ ಕುಟುಂಬಸ್ಥರು ಭಾಗಿ

ನಾಡಿನ ಹಂಪಿ, ಕದಂಬ, ಲಕ್ಕುಂಡಿ, ಚಾಲುಕ್ಯ, ಧಾರವಾಡ  ಉತ್ಸವ ಸಾಲಿಗೆ ಬಳ್ಳಾರಿ ಉತ್ಸವ ಸೇರಿದೆ. ಬಳ್ಳಾರಿ ನಗರವನ್ನು ಉಕ್ಕಿನ ನಗರ‌ ಎಂದು ಕರೆಯುತ್ತೇವೆ. ದೇವರು ಬಳ್ಳಾರಿ ಜಿಲ್ಲೆಯನ್ನು ಉಕ್ಕಿನ‌ ಜಿಲ್ಲೆಯಾಗಿ ಮಾಡಿದ್ದಾನೆ. ಹನುಮಪ್ಪ ನಾಯಕ ಉಕ್ಕಿನಂಥ ಕೋಟೆ ನಿರ್ಮಿಸಿದ್ದಾರೆ.  ರಾಜ್ಯದಲ್ಲಿ ಮಾತ್ರವಲ್ಲ ದೇಶದ ಭೂಪಟದಲ್ಲಿ ಬಳ್ಳಾರಿ ಜಿಲ್ಲೆಯನ್ನು ಸುವರ್ಣ ಅಕ್ಷರದಲ್ಲಿ ಗುರುತಿಸಲಾಗುತ್ತಿದೆ. ಜಿಲ್ಲೆಯ ಕಲೆ ಹಾಗೂ ಸ್ವಾಭಿಮಾನದ ಪ್ರತೀಕವಾಗಿ ಬಳ್ಳಾರಿ ಉತ್ಸವ ಆಯೋಜಿಸಲಾಗಿದೆ ಎಂದರು.

ಚುನಾವಣೆ ಹಿನ್ನಲೆ ಅಭಿವೃದ್ಧಿ ವಿವರಣೆ ನೀಡಿದ ಶ್ರೀರಾಮುಲು

ಶತಮಾನದ ಇತಿಹಾಸ ಇರುವ ಬಳ್ಳಾರಿಯ ಕೃಷಿ ಕಾಲೇಜಿಗೆ ರೂ.25. ಕೋಟಿ ಮಂಜೂರು ಮಾಡಲಾಗಿದೆ.  ಜೀನ್ಸ್ ಉತ್ಪಾದನಾ ಉದ್ಯಮಕ್ಕೆ 50 ಎಕರೆ ಜಮೀನು ನೀಡಿ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲು ಸರ್ಕಾರ ರೂ100 ಕೋಟಿ ಬಿಡುಗಡೆ ಮಾಡಲಾಗಿದೆ. 2008 ರಲ್ಲಿ ಪ್ರಾರಂಭಿಸಿದ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿಯಾಗಿ 40 ಕೋಟಿ ನೀಡಿಲಾಗಿದೆ. ಶೀಘ್ರದಲ್ಲೇ ಬಳ್ಳಾರಿ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಾಗುವುದು. ನಗರದಲ್ಲಿ 20 ಎಕರೆ ವಿಸ್ತೀರ್ಣ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. 23 ಎಕರೆ ವೆಚ್ಚದಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಹಾಗೂ ಸಂಸ್ಕರಣಾ ಘಟಕ ನಿರ್ಮಿಸಲಾಗಿದೆ. ಒಲಂಪಿಕ್  ಕ್ರೀಡೆಗಳಲ್ಲಿ ಜಿಲ್ಲೆಯ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಅನುಕೂಲವಾಗುವಂತೆ ಸಿಂಥಟಿಕ್ ಟ್ರಾಕ್ ನಿರ್ಮಿಸಲಾಗಿದೆ. ನಗರದಲ್ಲಿ ಹಾಕಿ ಕ್ರೀಡಾಂಗಣ ನಿರ್ಮಿಸಲಾಗಿದೆ ಎಂದು ಬಳ್ಳಾರಿ ಜನರಿಗೆ ತಾವು ಮಾಡಿದ ಅಭಿವೃದ್ಧಿ ವಿವರಣೆ ನೀಡಿದ್ರು..

Bellary: ಹೂವಲ್ಲೇ ಅರಳಿತು ಕನಕದುರ್ಗಮ್ಮ ದೇವಾಲಯ, ಪಂಜುರ್ಲಿ ದೈವ

ಶ್ರೀರಾಮುಲು ಎಂಬ ಬಾನ ಎತ್ತರದ ಗಾಳಿಪಟದ ಸೂತ್ರ ಬಳ್ಳಾರಿ ಜನತೆ ಕೈಯಲ್ಲಿ 

ಬಳ್ಳಾರಿ ಜನರು ನನ್ನನ್ನು ಉತ್ತಂಗಕ್ಕೆ ಏರಿಸಿದ್ದಾರೆ. ಗಾಳಿಪಟದ ರೀತಿಯಲ್ಲಿ ಬಾನ ಎತ್ತರದ ಹಾರಾಡುತ್ತಿರುವ ನನ್ನ ಸೂತ್ರ ಬಳ್ಳಾರಿ ಜನತೆ ಕೈಯಲ್ಲಿದೆ. ಬಳ್ಳಾರಿ ರಾಜಕೀಯವಾಗಿ ನನಗೆ ಪುನರ್ಜನ್ಮ ನೀಡಿದ್ದಿರಿ. ನಾಯಕ ಜನಾಂಗದಲ್ಲಿ ಹುಟ್ಟಿದ ಶ್ರೀರಾಮುಲು ಎಲ್ಲಾ ಜನಾಂಗದ ಪ್ರೀತಿ ಅಭಿಮಾನ ಗಳಿಸಿದ್ದೇನೆ.‌ ಬಳ್ಳಾರಿ ಜಿಲ್ಲೆ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಸಚಿವ ಶ್ರೀರಾಮುಲು ಭಾವುಕವಾಗಿ ನುಡಿದರು‌. 

ಭಾವನಾತ್ಮಕವಾಗಿ ಮಾತನಾಡಿದ ರಾಘವೇಂದ್ರ ರಾಜಕುಮಾರ

ಇನ್ನೂ ಪುನೀತ್ ಪುತ್ತಳಿ ಅನಾವರಣ ಬಳಿಕ ವೇದಿಕೆಗೆ ಬಂದಿದ್ದ ನಟ ರಾಘವೇಂದ್ರ ರಾಜಕುಮಾರ ಅವರು   ಅಭಿಮಾನಿಗಳು ನಮ್ಮ ಮನೆಯ ದೇವರುಗಳು ಎಂದ್ರು. ಬಳ್ಳಾರಿ ಉತ್ಸವ ಒಂದು ರೀತಿಯಲ್ಲಿ ಬಳ್ಳಾರಿಯ ದಸರಾ ಆಗಿ ಆಚರಣೆ ಮಾಡಲಾಗುತ್ತಿದೆ ಎಂದರು. ಪುನೀತ್ ರಾಜಕುಮಾರ್ ಅವರನ್ನು ಅಭಿಮಾನಿಗಳು ಸ್ಟಾರ್ ಆಗಿ ನೋಡುತ್ತಿದ್ದರು. ಆದರೆ ಈಗ ಅವರನ್ನು ಪುತ್ತಳಿಯ ರೂಪದಲ್ಲಿ ನೋಡುವಂತಾಗಿದೆ. ಪುನೀತ್ ಮೇಲೆ ಅಭಿಮಾನಿಗಳು ಇಟ್ಟಿರುವ ಅಭಿಮಾನ ಅಜರಾಮರ ಎನ್ನುತ್ತಾ, ಪುನೀತ ಅವರ ರಾಜಕುಮಾರ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೇ ರಾಜಕುಮಾರ ಎಂಬ ಹಾಡು ಹೇಳಿದರು.

Follow Us:
Download App:
  • android
  • ios