ಮುಂಜಾನೆ‌ ನಿದ್ರೆಯಲ್ಲಿದ್ದ ಅಧಿಕಾರಿಗಳ ಮೈ ಚಳಿ ಬಿಡಿಸಿದ ಸಚಿವ ಬೈರತಿ ಬಸವರಾಜ್| ಹುಬ್ಬಳ್ಳಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ| ಕುಂಟುತ್ತಾ ಸಾಗಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಬಗ್ಗೆ ಅಸಮಾಧಾನ| ಹಲವು ಕಾಮಗಾರಿಗಳು ಅಪೂರ್ಣವಾಗಿದಕ್ಕೆ ತರಾಟೆ| 

ಹುಬ್ಬಳ್ಳಿ(ಸೆ.06): ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಇಂದು(ಭಾನುವಾರ) ಇಂದು ಬೆಳ್ಳಂಬೆಳಿಗ್ಗೆ ನಗರ ಪ್ರದಕ್ಷಿಣೆ ಹಾಕುವ ಮೂಲಕ ಮುಂಜಾನೆ‌ ನಿದ್ರೆಯಲ್ಲಿದ್ದ ಅಧಿಕಾರಿಗಳ ಮೈ ಚಳಿ ಬಿಡಿಸಿದ್ದಾರೆ. 

ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಕುಂಟುತ್ತಾ ಸಾಗಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ಹಲವು ಕಾಮಗಾರಿಗಳು ಅಪೂರ್ಣವಾಗಿದಕ್ಕೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ನಗರದ ಗ್ಲಾಸ್ ಹೌಸ್ ನವೀಕರಣ, ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್, ಚಿಟಗುಪ್ಪಿ ಆಸ್ಪತ್ರೆ ಕಾಮಗಾರಿಯನ್ನ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿಯನ್ನ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಛೋಟಾ ಮುಂಬೈ ಹುಬ್ಬಳ್ಳಿಗೆ ಗಡಿಭಾಗದಿಂದಲೇ ಬರುತ್ತೆ ಗಾಂಜಾ!

ಇತ್ತೀಚೆಗಷ್ಟೇ ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಕಾರಿಗಳನ್ನ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಪರಿಶೀಲನೆ ನಡೆಸಿದ್ದರು. ಇಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಸಿಟಿ ರೌಂಡ್ಸ್‌ ಹಾಕಿದ್ದಾರೆ.