ಗದಗ(ಜು.14):  ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಕುರಿತು ಎರಡು ದಿನ ಬಿಟ್ಟು ನಿರ್ಧಾರ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ.

ರಾಜ್ಯದ ಹಲವು ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್‌ಡೌನ್‌ ಜಾರಿ ಮಾಡುವ ಕುರಿತು ನಡೆದ ಚರ್ಚೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್‌ಡೌನ್‌ ಮಾಡುವ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ತಜ್ಞ ವೈದ್ಯರ ಜತೆಗೆ ಚರ್ಚೆ ಮಾಡುತ್ತೇನೆ. ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದಲ್ಲಿ ಗದಗ ಜಿಲ್ಲೆಯಲ್ಲಿ ಸೋಂಕು ಸ್ವಲ್ಪ ನಿಯಂತ್ರಣದಲ್ಲಿದೆ. ಹೀಗಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೊರೋನಾ ಮಧ್ಯೆ ಪಾರ್ಟಿ ಮಾಡಿದ್ದ ಶ್ರೀರಾಮುಲು ಆಪ್ತ ಶಿವನಗೌಡರ ಬಿಜೆಪಿಯಿಂದ ಅಮಾನತು

ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣದಲ್ಲಿದ್ದು, ಸದ್ಯಕ್ಕೆ ಗದಗ ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿ ಮಾಡುವ ವಿಚಾರ ಇಲ್ಲ. ಲಾಕ್‌ಡೌನ್‌ ವಿಚಾರವಾಗಿ ಎರಡು ದಿನ ಬಿಟ್ಟು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆಗೆ ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ಅವರು ತಿಳಿಸಿದ್ದಾರೆ.