ಧಾರವಾಡ(ಡಿ.22): ಮಹದಾಯ ವಿಷಯದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುವುದಿಲ್ಲ, ಮಹದಾಯಿ ಹೋರಾಟ ಪ್ರಾರಂಭ ಮಾಡಿದವರೇ ಬಿಜೆಪಿಯವರು, ನಿನ್ನೆಯಷ್ಟೇ ಕೇಂದ್ರ ಸಚಿವ ಪ್ರಕಾಶ ಜಾವಡೇಕರ ಕರ್ನಾಟಕಕ್ಕೆ ಸಿಹಿ ಸುದ್ದಿ ಅಂತ ಹೇಳಿದ್ದಾರೆ. ಅವರ ಮಾತಿನಲ್ಲಿ ನಮಗೆ ವಿಶ್ವಾಸ ಇದೆ ಎಂದು ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ. 

ಭಾನುವಾರ ನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೇಂದ್ರ ಸಚಿವರೊಂದಿಗೆ ಬಸವರಾಜ ಬೊಮ್ಮಾಯಿ ಚರ್ಚೆ ಮಾಡುತ್ತಿದ್ದಾರೆ. ಕೇಂದ್ರದಿಂದ ಮಹದಾಯಿ ಹೋರಾಟಗಾರರಿಗೆ ಮತ್ತು ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗುವುದಿಲ್ಲ. ಈ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲಾರೆ, ಕೇಂದ್ರ ಸಚಿವ ಪ್ರಕಾಶ ಜಾವಡೇಕರ ಹೇಳಿದ್ದರಲ್ಲಿ ವಿಶ್ವಾಸ ಇದೆ ಅಂತ ಹೇಳಬಲ್ಲೆ ಎಂದು ತಿಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಖಾತೆ ಹಂಚಿಕೆ ಸಿಎಂ ಪರಮಾಧಿಕಾರವಾಗಿದೆ. ಈಗಾಗಲೇ ಹೆಚ್ಚುವರಿಯಾಗಿ ಒಂದೊಂದು ಖಾತೆ ಕೊಟ್ಟಿದ್ದಾರೆ. ನನಗೆ ಗಣಿ ಮತ್ತು ಭೂ ವಿಜ್ಞಾನ ಖಾತೆ ಜೊತೆಗೆ ಪರಿಸರ ಖಾತೆ ಕೊಟ್ಟಿದ್ದಾರೆ. ಈಗ ಯಾವ ಖಾತೆ ಯಾರಿಗೆ ಕೊಡಬೇಕು ಯಾರಿಗೆ ಬಿಡಬೇಕು ಎನ್ನುವುದು ಸಿಎಂ ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದ್ದಾರೆ.