ಅಂಬೇಡ್ಕರ್ ಅಧ್ಯಯನದಿಂದ ವಿದ್ಯಾರ್ಥಿಗಳ ಜೀವನ ಹಸನು: ಸಚಿವ ಡಿ.ಸುಧಾಕರ್
ವಿದ್ಯಾರ್ಥಿಗಳು ಅಂಬೇಡ್ಕರ್ ಅವರನ್ನು ಓದುವ ಅಭ್ಯಾಸ ರೂಢಿಸಿಕೊಂಡಲ್ಲಿ ಭವಿಷ್ಯದ ಬದುಕು ಹಸನಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಹಿರಿಯೂರು (ಸೆ.03): ವಿದ್ಯಾರ್ಥಿಗಳು ಅಂಬೇಡ್ಕರ್ ಅವರನ್ನು ಓದುವ ಅಭ್ಯಾಸ ರೂಢಿಸಿಕೊಂಡಲ್ಲಿ ಭವಿಷ್ಯದ ಬದುಕು ಹಸನಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ನಗರದ ತಾಹಾ ಪ್ಯಾಲೇಸ್ ಸಭಾಂಗಣದಲ್ಲಿ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ತಾಲೂಕು ಶಾಖೆ ವತಿಯಿಂದ 2022-23 ನೇ ಸಾಲಿನ ಎಸ್ಎಸ್ಎಲ್ ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾವಿರಾರು ಸಂಕಷ್ಟಗಳ ನಡುವೆಯೂ ಅಂಬೇಡ್ಕರ್ ಎಂಬ ಮಹಾತ್ಮ ಬೆಳೆದು ಬಂದ ಪರಿ ನಮಗೆ ದಾರಿ ದೀಪವಾಗಬೇಕು ಎಂದರು.
ವಿದ್ಯಾರ್ಥಿಗಳು ಸಂಸ್ಕಾರ, ಶಿಸ್ತು ಹಾಗೂ ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಮುಖ್ಯವಾಹಿನಿಗೆ ಬರಲು ಮಾದಿಗ ಸಮಾಜವು ಪ್ರಯತ್ನಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ. ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಒತ್ತು ನೀಡಬೇಕು. ತಾಲೂಕಿನಲ್ಲಿ ಈ ಸಮಾಜದ ಅಭಿವೃದ್ಧಿಗೆ ತನು, ಮನ, ಧನದ ನೆರವಿನೊಂದಿಗೆ ಸದಾ ಕಾಲವು ಜೊತೆಯಲ್ಲಿರುತ್ತೇನೆ ಎಂದರು. ಕಾಂಗ್ರೆಸ್ ಸರ್ಕಾರ ಜನತೆಗೆ ನೀಡಿದ ಐದು ಗ್ಯಾರಂಟಿಗಳಲ್ಲಿ ನಾಲ್ಕು ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದೆ .ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕೆ ಶಕ್ತಿ ತುಂಬಿದಂತಾಗಿದೆ. ಈ ರಾಜ್ಯದಲ್ಲಿ ಎಲ್ಲಾ ವರ್ಗದವರಿಗೂ ಸಮಾನ ನ್ಯಾಯ ಒದಗಿಸುವ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ ಎಂದರು.
ಸಿದ್ದರಾಮಯ್ಯಗೆ ಬಡವರ ಮಕ್ಕಳು ಉದ್ಧಾರವಾಗಬಾರದು: ಪ್ರತಾಪ್ ಸಿಂಹ ವಾಗ್ದಾಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಬಿ.ಎನ್ ಚಂದ್ರಪ್ಪ ಮಾತನಾಡಿ, ಶಿಕ್ಷಣದ ಛಲವಿದ್ದರೆ ಸಾಧನೆಗೆ ಯಾವುದೂ ಅಡ್ಡಿಯಾಗುವುದಿಲ್ಲ. ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ಮುಂತಾದ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಗಳು ಇದಕ್ಕೆ ನಿದರ್ಶನವಾಗಿವೆ. ಆದ್ದರಿಂದ ಮಕ್ಕಳು ಶಿಕ್ಷಣ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದರು. ಕೆಪಿಸಿಸಿ ಅಸಂಘಟಿತ ಕಾರ್ಮಿಕರ ರಾಜ್ಯಾಧ್ಯಕ್ಷ ಜಿಎಸ್.ಮಂಜುನಾಥ್ ಮಾತನಾಡಿ, ಶೋಷಿತ ಸಮುದಾಯಗಳಿಗೆ ಅಂಬೇಡ್ಕರ್ ಚಿಂತನೆಗಳು ಸದಾ ದಿಕ್ಸೂಚಿ. ಅಂಬೇಡ್ಕರ್ ಹೆಸರು ಹೇಳುವ ಮುನ್ನ ಅವರನ್ನು ಓದುವ ಹವ್ಯಾಸ ರೂಢಿಸಿ ಕೊಳ್ಳಬೇಕು.
ಬಿಜೆಪಿಯ 26 ಮಂದಿ ಸಂಸದರು ಗುಲಾಮಗಿರಿಯಲ್ಲಿದ್ದಾರೆ: ಮುಖ್ಯಮಂತ್ರಿ ಚಂದ್ರು
ಮನೆ,ಮನೆಗಳಲ್ಲಿ ಅಂಬೇಡ್ಕರ್ ಚಿಂತನೆಗಳ ತುಂಬಿಕೊಳ್ಳುವ ಪ್ರಯತ್ನವನ್ನು ಯುವ ಸಮೂಹ ಮಾಡಬೇಕೆಂದರು. ಹರಳಯ್ಯ ಗುರುಪೀಠದ ಶರಣ ಹರಳಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನಗರಸಭೆ ಸದಸ್ಯ ಸಣ್ಣಪ್ಪ, ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ, ದಲಿತ ಮುಖಂಡ ಟಿ.ಡಿ.ರಾಜಗಿರಿ, ವಕೀಲ ರಂಗಸ್ವಾಮಿ, ನಿವೃತ್ತ ಪಿಎಸ್‌ಐ ನಾಗರಾಜ್, ಸಿದ್ದಲಿಂಗಮ್ಮ, ಪಾತಪ್ಪ, ಆರ್.ರಾಮಣ್ಣ, ಎಸ್.ಆರ್.ಮಂಜುನಾಥ್, ಕೆ.ರಾಮಚಂದ್ರಪ್ಪ, ಕೆಂಚಪ್ಪ, ಜೀವೇಶ್, ಜಿ.ಎಲ್.ಮೂರ್ತಿ, ಕಲ್ಲಟ್ಟಿ ಹರೀಶ್ ಮುಂತಾದವರು ಹಾಜರಿದ್ದರು.