Asianet Suvarna News Asianet Suvarna News

ಜಾತಿ ಗಣತಿ ವರದಿ ವಿಷಯದಲ್ಲಿ ಕ್ಯಾಬಿನೆಟ್‌ ತೀರ್ಮಾನವೇ ಸುಪ್ರಿಂ: ಡಿಕೆಶಿಗೆ ಮಹದೇವಪ್ಪ ತಿರುಗೇಟು

ಜಾತಿ ಗಣತಿ ವರದಿ ಬಿಡುಗಡೆ ವಿಷಯದಲ್ಲಿ ಕ್ಯಾಬಿನೆಟ್ ತೀರ್ಮಾನವೇ ಅಂತಿಮ. ಅಲ್ಲಿ ಒಪ್ಪಿಗೆ ಪಡೆದ ಮೇಲೆ ಮತ್ತೆ ಯಾರ ಮಾತೂ ಬರುವುದಿಲ್ಲ ಎನ್ನುವ ಮೂಲಕ ವರದಿಗೆ ವಿರೋಧ ವ್ಯಕ್ತಪಡಿಸಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಡಾ.ಎಚ್‌.ಸಿ. ಮಹದೇವಪ್ಪ 

Minister Dr HC Mahadevappa Talks Over Caste Census Report grg
Author
First Published Dec 1, 2023, 1:30 AM IST

ಮೈಸೂರು(ಡಿ.01): ಜಾತಿ ಗಣತಿ ವರದಿ ಬಿಡುಗಡೆ ವಿಷಯದಲ್ಲಿ ಕ್ಯಾಬಿನೆಟ್‌ ತೀರ್ಮಾನವೇ ಸುಪ್ರಿಂ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು.

ಗುರುವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಿಡುಗಡೆ ವಿಷಯದಲ್ಲಿ ಕ್ಯಾಬಿನೆಟ್ ತೀರ್ಮಾನವೇ ಅಂತಿಮ. ಅಲ್ಲಿ ಒಪ್ಪಿಗೆ ಪಡೆದ ಮೇಲೆ ಮತ್ತೆ ಯಾರ ಮಾತೂ ಬರುವುದಿಲ್ಲ ಎನ್ನುವ ಮೂಲಕ ವರದಿಗೆ ವಿರೋಧ ವ್ಯಕ್ತಪಡಿಸಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು. ಎಐಸಿಸಿ ನಾಯಕ ರಾಹುಲ್ ಗಾಂಧಿ ಸೇರಿ ಎಲ್ಲರು ವರದಿ ಬಿಡುಗಡೆ ಮಾಡುವಂತೆ ಹೇಳಿದ್ದಾರೆ. ಕ್ಯಾಬಿನೆಟ್‌ನಲ್ಲೂ ಈ ಬಗ್ಗೆ ತೀರ್ಮಾನ ಆಗುತ್ತದೆ. ರಾಹುಲ್ ಗಾಂಧಿ ಅವರೇ ಇದರ ಪರ ಇದ್ದಾರೆ. ಪಕ್ಷ ಹಾಗೂ ಕ್ಯಾಬಿನೆಟ್ ಎಲ್ಲಾ ವರದಿಯ ಪರ ಇದ್ದಾರೆ. ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದರು.

ಡಿಕೆಶಿ ಕೇಸ್‌: ಸಚಿವ ಸಂಪುಟದ ತೀರ್ಮಾನ ಕಾನೂನಾತ್ಮಕವಾಗಿದೆ: ಸಚಿವ ಮಹದೇವಪ್ಪ

ಪಂಚರಾಜ್ಯ ಚುನಾವಣೆ ಪೈಕಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್‌ ಪರವಾದ ವಾತಾವರಣವಿದೆ. ಒಂದು ರಾಜ್ಯದಲ್ಲಿ ಸ್ಥಳೀಯ ಪಕ್ಷ ಅಧಿಕಾರ ಹಿಡಿಯಬಹುದು. ಎಲ್ಲಾ ಕಡೆ ತೀವ್ರ ಸ್ಪರ್ಧೆ ಇದೆ. ಈ ಚುನಾವಣೆಯು ಲೋಕಸಭಾ ಚುನಾವಣೆಗೆ ದಿಕ್ಸೂಚಿಯಲ್ಲ. ಏಕೆಂದರೆ ಸ್ಥಳೀಯ ವಿಚಾರಗಳು ಬೇರೆ ಬೇರೆ ಇರುತ್ತವೆ ಎಂದರು.

Follow Us:
Download App:
  • android
  • ios