ಕೊರೋನಾ ಲಸಿಕೆ ಸಂಪೂರ್ಣ ಸುರಕ್ಷಿತ: ಸಚಿವ ಸುಧಾಕರ್‌

ಲಸಿಕೆ ಪಡೆಯುವುದರಿಂದ ಕೋವಿಡ್‌ ರೋಗದ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ| ಕೋವಿಶೀಲ್ಡ್‌ ಲಸಿಕೆಯ ಮೂರು ಹಂತದ ಪರಿಶೀಲನೆ ಜರುಗಿದೆ| ಒತ್ತಾಯ ಪೂರ್ವಕವಾಗಿ ಲಸಿಕೆ ನೀಡುತ್ತಿಲ್ಲ| ಪ್ರತಿಯೊಂದೂ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ: ಸುಧಾಕರ್‌| 

Minister Dr K Sudhakar Says Coronavirus Vaccine is Completely Safe grg

ಹುಬ್ಬಳ್ಳಿ(ಜ.20): ಡ್ರಗ್‌ ಕಂಟ್ರೋಲರ್‌ ಜನರಲ್‌ ಆಫ್‌ ಇಂಡಿಯಾದಿಂದ ಅನುಮತಿ ಪಡೆದ ದೇಶದ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್‌ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿವೆ. ಜಿಲ್ಲೆಗಳಿಗೆ ತೆರಳಿ ವ್ಯಾಕ್ಸಿನ್‌ ವಿತರಣೆ ಬಗ್ಗೆ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ಪಡೆಯುವುದರಿಂದ ಕೋವಿಡ್‌ ರೋಗದ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಕೋವಿಶೀಲ್ಡ್‌ ಲಸಿಕೆಯ ಮೂರು ಹಂತದ ಪರಿಶೀಲನೆ ಜರುಗಿದೆ. ಒತ್ತಾಯ ಪೂರ್ವಕವಾಗಿ ಲಸಿಕೆ ನೀಡುತ್ತಿಲ್ಲ ಎಂದರು.

ಕುಮಾರಸ್ವಾಮಿ ಆಪ್ತ ಜೆಡಿಎಸ್‌ಗೆ ರಾಜೀನಾಮೆ: ಪಕ್ಷದ ಮತ್ತೊಂದು ಪ್ರಮುಖ ವಿಕೆಟ್ ಪತನ

ದೇಶದಲ್ಲಿ ಅತಿ ಹೆಚ್ಚು ಕೋವಿಡ್‌ ಲಸಿಕೆ ಕರ್ನಾಟಕ ರಾಜ್ಯದಲ್ಲಿ ನೀಡಲಾಗಿದೆ. ಹೊಸ ಲಸಿಕೆ ಪಡೆಯುವಲ್ಲಿ ಸಹಜವಾಗಿ ಅಳುಕಿನ ಮನೋಭಾವ ಇರುತ್ತೆ. ಲಸಿಕೆ ಪಡೆದವರು ಆರೋಗ್ಯವಾಗಿ, ಕ್ಷೇಮವಾಗಿ ಇರುವುದನ್ನು ನೋಡಿದಾಗ ಇತರರಿಗೂ ಲಸಿಕೆ ಬಗ್ಗೆ ಇರುವ ಭಯ ಹೋಗುತ್ತದೆ ಎಂದರು. ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ 24/7 ಕಾರ್ಯ ನಿರ್ವಹಿಸುವಂತೆ ಮಾಡಲಾಗುವುದು ಎಂದರು.

ಕನ್ನಡ ಅಭಿಮಾನ ನನಗೆ ಹೇಳಬೇಡಿ:

ಕರವೇ (ನಾರಾಯಣಗೌಡ ಬಣ) ಕಾರ್ಯಕರ್ತರು ಕಿಮ್ಸ್‌ ಬಳಿ ಕಪ್ಪು ಬಾವುಟ ಪ್ರದರ್ಶಿಸಿ, ಸುಧಾಕರ್‌ ರಾಜೀನಾಮೆಗೆ ಆಗ್ರಹಿಸಿದ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕನ್ನಡ ಅಭಿಮಾನವನ್ನು ನನಗೆ ಹೇಳಿ ಕೊಡಲು ಬರಬೇಡಿ, ನಾರಾಯಣಗೌಡ ನನ್ನಷ್ಟು ಸಾಹಿತ್ಯ ಓದಿದ್ದಾರಾ? ನಿಪ್ಪಾಣಿ ಕಾರ್ಯಕ್ರಮದಲ್ಲಿ ಕೆಲವರು ಮರಾಠಿಯಲ್ಲಿ ಮಾತನಾಡಿದರೆ ನಾನೇನು ಮಾಡಬೇಕು? ನನ್ನದೇನು ತಪ್ಪು? ಪ್ರಶ್ನಿಸಿದ್ದಾರೆ. 
 

Latest Videos
Follow Us:
Download App:
  • android
  • ios