ಬೆಂಗಳೂರು, (ಆ.01) : ನಿಮ್ಮ ಸಮಸ್ಯೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳ ಜೊತೆಗೆ ಮಾತನಾಡುತ್ತೇನೆ.  ಕೊರೋನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್,ಮನವಿ ಮಾಡಿದ್ದಾರೆ.

"

ವಿವಿಧ ಬೇಡಿಕೆ ಈಡೇರಿಸುವಂತೆ ಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್ ಸಿಬ್ಬಂದಿ ಪಿಪಿಇ ಕಿಟ್ ಧರಿಸಿಯೇ ಪ್ರತಿಭಟನೆಗೆ ಇಳಿದಿದ್ದಾರೆ.

ದುಬಾರಿ ಶುಲ್ಕ: ಖಾಸಗಿ ಆಸ್ಪತ್ರೆ ವಿರುದ್ಧ ಮುಲಾಜಿಲ್ಲದೇ ಕ್ರಮವೆಂದ ಸಚಿವ ಸುಧಾಕರ್

ಈ ಕುರಿತಂತೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿರುವ ಖಾಯಂ ಶುಶ್ರೂಷಕರ ಸಂಘಕ್ಕೆ ತಿಳಿಸುವುದೇನೆಂದರೆ ನಿಮ್ಮ ವಿವಿಧ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳಾದ ಶೀ ಬಿಎಸ್‌ವೈ ಜೊತೆ ಚರ್ಚೆ ಮಾಡುತ್ತೇನೆ ಭರವಸೆ ನೀಡಿದ್ದಾರೆ.

 ಅಲ್ಲದೇ ಪ್ರತಿಭಟನೆ ಕೈಬಿಟ್ಟು ಕೆಲಸ ಮಾಡಿ. ಮುಖ್ಯಮಂತ್ರಿಗಳೊಂದಿಗೆ ನಿಮ್ಮ ಸಮಸ್ಯೆ ಬಗ್ಗೆ ಚರ್ಚೆ ನಡೆಸಿ, ನಿಮ್ಮ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

"

ಆದಷ್ಟು ಬೇಗ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ. ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಈ ತಕ್ಷಣವೇ ತಾವು ಕಾರ್ಯಪ್ರವೃತ್ತರಾಗಿ. ಕೊರೋನಾ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಸರ್ಕಾರ ನಿಮ್ಮ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡುತ್ತಿದ್ದೇನೆ ಎಂದಿದ್ದಾರೆ.