Asianet Suvarna News Asianet Suvarna News

ಬೀದರ್: ಕೌಡಗಾವ್‌ನಲ್ಲಿ ದಲಿತರಿಗೆ ಸ್ಮಶಾನ ಭೂಮಿ ಮಂಜೂರಿಗೆ ಖಂಡ್ರೆ ಸೂಚನೆ

ಕೌಡಗಾವ್ ಗ್ರಾಮದಲ್ಲಿನ ಸಮುದಾಯಗಳ ಮಧ್ಯದ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಕಾನೂನಿನ ಚೌಕಟ್ಟಿನಲ್ಲಿ ಸಮಾನ ನ್ಯಾಯ ಒದಗಿಸಲಾಗುವುದು. ಎಲ್ಲರೂ ಭಿನ್ನಾಭಿಪ್ರಾಯ ಮರೆತು ಶಾಂತಿ, ಸೌಹಾರ್ದತೆಯಿಂದ ಸೋದರರಂತೆ ಬಾಳುವಂತೆ. ಶಾಂತಿ, ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದ ಸಚಿವ ಈಶ್ವರ್‌ ಖಂಡ್ರೆ 

Minister Eshwar Khandre Instruct to Give Cemetery Land to Dalits at Koudgaon in Bidar grg
Author
First Published Feb 15, 2024, 12:57 PM IST

ಬೀದರ್(ಫೆ.15): ಭಗವಾನ್ ಬುದ್ಧ, ವಿಶ್ವಗುರು ಬಸವಣ್ಣನವರು ಮತ್ತು ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಹಬಾಳ್ವೆ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳಿನ ತತ್ವ ಸಾರಿದರು. ನಾವು ಅವರೆಲ್ಲರ ಆದರ್ಶ ಗಳನ್ನು ಪಾಲಿಸಬೇಕು ಎಂದು ಸಚಿವ ಈಶ್ವರ್‌ ಖಂಡ್ರೆ ಅವರು ಮನವಿ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಔರಾದ್ ತಾಲೂಕಿನ ಕೌಡಗಾವ್‌ನಲ್ಲಿ ಎರಡು ಸಮುದಾಯಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಮತ್ತು ಆತಂಕದ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಚಿವ ಈಶ್ವರ್‌ ಖಂಡ್ರೆ ಅವರು, ಕೌಡಗಾವ್ ಗ್ರಾಮದಲ್ಲಿನ ಸಮುದಾಯಗಳ ಮಧ್ಯದ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಕಾನೂನಿನ ಚೌಕಟ್ಟಿನಲ್ಲಿ ಸಮಾನ ನ್ಯಾಯ ಒದಗಿಸಲಾಗುವುದು. ಎಲ್ಲರೂ ಭಿನ್ನಾಭಿಪ್ರಾಯ ಮರೆತು ಶಾಂತಿ, ಸೌಹಾರ್ದತೆಯಿಂದ ಸೋದರರಂತೆ ಬಾಳುವಂತೆ. ಶಾಂತಿ, ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಬೀದರ್: ಬಿಜೆಪಿಯಿಂದ 'ಮತದಾರರಿಗೆ ಉತ್ತರಿಸಿ' ಅಭಿಯಾನ

ಜಿಲ್ಲಾಡಳಿತಕ್ಕೆ ಸೂಚನೆ:

ಔರಾದ್ ತಾಲೂಕು ಕೌಡಗಾವ್‌ನಲ್ಲಿ ದಲಿತ ಸಮುದಾಯದವರು ಮೃತಪಟ್ಟಾಗ ಅಂತ್ಯಕ್ರಿಯೆ ನೆರವೇರಿಸಲು ಸ್ಮಶಾನ ಭೂಮಿ ಇಲ್ಲದಿರುವುದು ಗಮನಕ್ಕೆ ಬಂದಿದ್ದು, ಕೂಡಲೇ ಜಿಲ್ಲಾಡಳಿತ ಜಾಗ ಗುರುತಿಸಿ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಸ್ಮಶಾನ ಭೂಮಿಗೆ ಬೇಕಾದ ಅನುದಾನವನ್ನು ಸರ್ಕಾರ ಮಂಜೂರು ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.

Follow Us:
Download App:
  • android
  • ios