Asianet Suvarna News Asianet Suvarna News

ಬೆಳಗಾವಿ: ಪ್ರವಾಹ ಪರಿಹಾರ ಕಾಮಗಾರಿ ತ್ವರಿತಗೊಳಿಸಲು ಶೆಟ್ಟರ್ ಸೂಚನೆ

ಜನಸಂಚಾರಕ್ಕೆ ಅಗತ್ಯವಿರುವ ಮುಖ್ಯ ರಸ್ತೆಗಳು ಹಾಗೂ ಗ್ರಾಮೀಣ ರಸ್ತೆಗಳನ್ನು ದುರಸ್ತಿಗೊಳಿಸುವ ಕೆಲಸ ಹತ್ತು ದಿನಗಳಲ್ಲಿ ಪೂರ್ಣಗೊಳಿಸಬೇಕು| ಈಗಾಗಲೇ ವಿಳಂಬವಾಗಿದ್ದು, ಇನ್ನಷ್ಟು ವಿಳಂಬವಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಶೆಟ್ಟರ್| 

Minister Jagadish Shettar Instruct to Officers Expedite Flood Relief Work
Author
Bengaluru, First Published Dec 28, 2019, 11:38 AM IST

ಬೆಳಗಾವಿ(ಡಿ.28): ಪ್ರವಾಹದ ಸಂದರ್ಭದಲ್ಲಿ ಉಂಟಾದ ಮನೆ ಹಾನಿಗೆ ಪರಿಹಾರ, ಬೆಳೆವಿಮೆ ಪರಿಹಾರ ಹಾಗೂ ರಸ್ತೆ, ಸೇತುವೆ ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಒದಗಿಸುವ ಕೆಲಸಗಳನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ. 

ಅವರು ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ 2019-20 ನೇ ಸಾಲಿನ ಮೂರನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಂಚಾರಕ್ಕೆ ಅಗತ್ಯವಿರುವ ಮುಖ್ಯ ರಸ್ತೆಗಳು ಹಾಗೂ ಗ್ರಾಮೀಣ ರಸ್ತೆಗಳನ್ನು ದುರಸ್ತಿಗೊಳಿಸುವ ಕೆಲಸ ಹತ್ತು ದಿನಗಳಲ್ಲಿ ಪೂರ್ಣಗೊಳಿಸಬೇಕು. ಈಗಾಗಲೇ ವಿಳಂಬವಾಗಿದ್ದು, ಇನ್ನಷ್ಟು ವಿಳಂಬವಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಪ್ರವಾಹದಿಂದ ಹಾನಿಗೊಳಗಾಗಿರುವ ರಸ್ತೆ, ಸೇತುವೆ ಮತ್ತಿತರ ಮೂಲಸೌಕರ್ಯಗಳನ್ನು ಪುನರ್ ನಿರ್ಮಿಸಲು ಸರ್ಕಾರ ಈಗಾಗಲೇ ಲೋಕೋಪಯೋಗಿ, ಸಣ್ಣ ನೀರಾವರಿ, ಪಂಚಾಯತ ರಾಜ್ ಎಂಜಿನಿಯರಿಂಗಗ್ ಇಲಾಖೆಗಳಿಗೆ ಹಣ ಬಿಡುಗಡೆ ಮಾಡಿದ್ದು, ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಎಲ್ಲ ಕೆಲಸಗಳನ್ನು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಪ್ರವಾಹ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ವ್ಯವಸ್ಥೆ ತೀವ್ರ ಹದಗೆಟ್ಟಿದೆ. ಆದರೆ ಅಥಣಿ, ಸವದತ್ತಿ ಸೇರಿದಂತೆ ಕೆಲವು ತಾಲ್ಲೂಕುಗಳಲ್ಲಿ ಇದುವರೆಗೆ ವಿದ್ಯುತ್ ಸಂಪರ್ಕ ಹಾಗೂ ರೈತರ ಪಂಪ್‌ಸೆಟ್ ಗಳಿಗೆ ಸಂಪರ್ಕ ನೀಡದಿರುವುದು ಕಂಡುಬಂದಿದೆ. ಆದ್ದರಿಂದ ಇನ್ನು ಹದಿನೈದು ದಿನಗಳಲ್ಲಿ ಕೆಲಸ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಪ್ರವಾಹದಿಂದ ಉಂಟಾದ ಹಾನಿ ಸರಿಪಡಿಸುವುದು ಆದ್ಯತೆ ನೀಡಬೇಕು. ರಾಜ್ಯಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ವಿಷಯಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಧಿಕಾರಿಗಳು ಜನಪ್ರತಿನಿಧಿಗಳ ಸೂಚನೆಗೆ ಕಾಯದೇ ಸ್ವಯಂಪ್ರೇರಣೆಯಿಂದ ಜನಪರ ಕೆಲಸ ಮಾಡಬೇಕು. ಬೆಳಗಾವಿ ಜಿಲ್ಲಾ ಪಂಚಾಯತಿಗೆ ಶಾಸನಬದ್ಧ ಅನುದಾನದ ಪ್ರಮಾಣ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವರ ಜತೆ ವಿಸ್ತ್ರತ ಚರ್ಚೆ ನಡೆಸಲಿದ್ದೇನೆ ಎಂದರು. 

ಜಿಪಂ ಶಾಸನಬದ್ಧ ಅನುದಾನ ಪ್ರಮಾಣ ಹೆಚ್ಚಿಸಲು ಮನವಿ: 

ಮುಂಬರುವ ದಿನಗಳಲ್ಲಿ ವಿವಿಧ ತಾಲೂಕುಗಳಲ್ಲಿ ಸಂಚರಿಸಿ ಜನರ ಸಮಸ್ಯೆ ಆಲಿಸುತ್ತೇನೆ ಎಂದು ಭರವಸೆ ನೀಡಿದ ಸಚಿವ ಶೆಟ್ಟರ್ ಅವರು, ಬೆಳೆಪರಿಹಾರ ತಾರತಮ್ಯ ಸರಿಪಡಿಸಬೇಕು ಎಂದು ತಿಳಿಸಿದರು. ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದ ರಿಂದ ಶಾಸನಬದ್ಧ ಅನುದಾನ ಪ್ರಮಾಣ ಹೆಚ್ಚಿಸಬೇಕು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐ ಹೊಳೆ ಮನವಿ ಮಾಡಿಕೊಂಡರು. 
ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಜನಸಂಖ್ಯೆ ಹಾಗೂ ಸದಸ್ಯರ ಸಂಖ್ಯೆಯನ್ನು ಆಧರಿಸಿ ಹೆಚ್ಚಿನ ಅನುದಾನ ಒದಗಿಸುವ ಅಗತ್ಯವಿದೆ ಎಂದರು. 

ಜಿಲ್ಲೆಯಲ್ಲಿ ಹಾನಿಗೊಳಗಾದ ಎ,ಬಿ ಹಾಗೂ ಸಿ ಕೆಟಗರಿಯಲ್ಲಿ ಒಟ್ಟು 44,166 ಮನೆಗಳ ವಿವರವನ್ನು ತಂತ್ರಾಂಶದಲ್ಲಿ ದಾಖಲಿಸಿ ಅನುಮೋದನೆಗೊಂಡಿದ್ದು, ಇದರಲ್ಲಿ 43174 ಫಲಾನಯಭವಿಗಳಿಗೆ 301.49 ಕೋಟಿ ಪರಿಹಾರವನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು. ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ಒಟ್ಟು 38 ಜನರು ಮೃತರಾಗಿದ್ದು, ಅದರಲ್ಲಿ 33 ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರುಪಾಯಿಯಂತೆ ಒಟ್ಟು 180 ಲಕ್ಷ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು. 

ತೀವ್ರ ಹಾನಿಗೊಳಗಾದ ವಿದ್ಯುತ್ ಮಗ್ಗಗಳ ನೇಕಾರರ ಪ್ರತಿ ಕುಟುಂಬಕ್ಕೆ ತಲಾ 25 ಸಾವಿರ ನೀಡಲಾಗಿದೆ. 435  ಕುಟುಂಬಗಳಿಗೆ 108.75 ಲಕ್ಷ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿಯು ನೀಡಿದರು. 
ಮನೆಹಾನಿಯಾದ ಸ್ಥಳವನ್ನು ಹೊರತುಪಡಿಸಿ ಬೇರೆ ಕಡೆ ಮನೆ ನಿರ್ಮಿಸಿಕೊಳ್ಳಲು ಅನೇಕ ಕುಟುಂಬಗಳು ಮುಂದಾಗಿದ್ದು, ಇದರ ಬಗ್ಗೆ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕಿದೆ. ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲೆಗೆ ಒಟ್ಟಾರೆ 867 ಕೋಟಿ ಬಿಡುಗಡೆಗೊಂಡಿರುತ್ತದೆ. ಇನ್ನೂ 327 ಕೋಟಿ ಉಳಿದಿದೆ. ಸರ್ಕಾರದಿಂದ ಅನುಮೋದನೆ ಗೊಂಡ ಬಳಿಕ ಉಳಿದ ಹಣವನ್ನು ವೆಚ್ಚಮಾಡಲಾ ಗುವುದು ಎಂದು ಹೇಳಿದರು. 

ಪ್ರವಾಹದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಲಾಗಿದ್ದು, ನಂತರದ ದಿನಗಳಲ್ಲಿ ಮಳೆಯಿಂದ ಕುಸಿದ ಮನೆಗಳಿಗೆ ಪರಿಹಾರ ನೀಡಿಲ್ಲ. ಆದ್ದರಿಂದ ಮಳೆಯಿಂದ ಹಾನಿಗೊಳಗಾದ ಮನೆಗಳಿಗೂ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ದುರ್ಯೋಧನ ಐಹೊಳೆ ಒತ್ತಾಯಿಸಿದರು. ಈ ಬಗ್ಗೆ ಈಗಾಗಲೇ ಸಮೀಕ್ಷೆ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಶೀಘ್ರ ಇದಕ್ಕೆ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಶೆಟ್ಟರ್ ಭರವಸೆ ನೀಡಿದರು. 

ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಮನೆಹಾನಿ ಮತ್ತು ಬೆಳೆಪರಿಹಾರ ವಿಮೆ ಅರ್ಹ ಕುಟುಂಬಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಸಮೀಕ್ಷೆಯಿಂದ ಹೊರಗುಳಿದಿರುವ ಹತ್ತು ಸಾವಿರ ಅರ್ಹ ಮನೆಗಳನ್ನು ಈಗಾಗಲೇ ಗುರುತಿಸಿ, ಪರಿಹಾರ ಬಿಡುಗಡೆಗೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದಷ್ಟು ಬೇಗನೇ ಪರಿಹಾರವನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು. ಬೆಳೆಪರಿಹಾರ, ರಸ್ತೆ ಸುಧಾರಣೆ ಹಾಗೂ ಇತರೆ ಮೂಲಸೌಕರ್ಯಗಳನ್ನು ಕಲ್ಪಿಸುವ ಕೆಲಸ ಚುರುಕಿನಿಂದ ಕೈಗೊಳ್ಳಬೇಕು ಎಂದರು. 

ಸವದತ್ತಿ ಶಾಸಕ ಆನಂದ ಮಾಮನಿ ಮಾತನಾಡಿ, ಎರಡು ಹೆಕ್ಟೇರ್ ಬೆಳೆಹಾನಿಗೆ ಪರಿಹಾರ ನೀಡಬೇಕು ಎಂಬ ನಿಯಮವಿದ್ದರೂ ಅಧಿಕಾರಿಗಳು ಸಮರ್ಪಕ ಸಮೀಕ್ಷೆ ನಡೆಸದೇ ಕಡಿಮೆ ಪರಿಹಾರ ನಿಗದಿಪಡಿ ಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಉಸ್ತುವಾರಿ ಸಚಿವ ಶೆಟ್ಟರ್ ಅವರು, ಇತರೆ ಜಿಲ್ಲೆಗಳಲ್ಲಿ ಎರಡು ಹೆಕ್ಟೇರ್ ಪರಿಹಾರ ನೀಡಬಹುದಾಗಿದ್ದರೂ ಅಧಿಕಾರಿಗಳು ಯಾಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು. ಇದೊಂದು ಗಂಭೀರ ವಿಷಯವಾಗಿದ್ದು, ಜಿಲ್ಲಾಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು. 

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ಜಂಟಿ ಸಮೀಕ್ಷೆ ಪ್ರಕಾರ ಸರ್ಕಾರಕ್ಕೆ ವರದಿ ಕಳಿಸಲಾಗಿದೆ. ಸಾಧ್ಯತೆ ಆಧರಿಸಿ ಮರು ಪರಿಶೀಲನೆ ನಡೆಸಲಾಗುವುದು ಎಂದರು. ಮನೆಹಾನಿ ಪರಿಹಾರದಿಂದ ವಂಚಿತಗೊಂಡಿರುವ ಅನೇಕ ಕುಟುಂಬಗಳು ಪ್ರತಿದಿನ ಶಾಸಕರ ಮನೆಗೆ ಅಲೆದಾಡುತ್ತಿದ್ದು, ಅಂತಹ ಮನೆಗಳನ್ನು ಮುಂದಿನ ಹಂತದಲ್ಲಿಯಾದರೂ ಗುರುತಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಶಾಸಕರಾದ ಅನಿಲ್ ಬೆನಕೆ ಮತ್ತು ಮಹಾಂತೇಶ ದೊಡ್ಡಗೌಡರ ಒತ್ತಾಯಿಸಿದರು. 

ಮಾತುಕತೆ ಮೂಲಕ ಮಹದಾಯಿ ವಿವಾದ ಇತ್ಯರ್ಥಕ್ಕೆ ಪ್ರಯತ್ನ 

ಸೌಹಾರ್ದ ಮಾತುಕತೆ ಮೂಲಕ ಮಹದಾಯಿ ವಿವಾದ ಇತ್ಯರ್ಥಕ್ಕೆ ಪ್ರಯತ್ನ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಮಹದಾಯಿ ವಿವಾದ ಇತ್ಯರ್ಥಕ್ಕೆ ಪ್ರಯತ್ನಿಸಲಾಗುವುದು ಎಂದು ಸಚಿವ ಜಗದೀಶ ಶೆಟ್ಟರ್ ಅವರು ಹೇಳಿದರು. 
ಗೋವಾ ರಾಜ್ಯಪಾಲರು ಏನು ಹೇಳಿಕೆ ನೀಡಿದ್ದಾರೆ ನನಗೆ ಗೊತ್ತಿಲ್ಲ. ಗೋವಾ ರಾಜ್ಯಪಾಲರ ಸಂದರ್ಶನವನ್ನೂ ನಾನು ನೋಡಿಲ್ಲ. ಈ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಮಹದಾಯಿ ವಿಚಾರವಾಗಿ ರಾಜ್ಯ ಬಿಜೆಪಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ಈಗಾಗಲೇ ಅವಾರ್ಡ್‌ ಆಗಿದ್ದು ನೋಟಿಫಿಕೇಷನ್ ಇಶ್ಯೂ ಮಾಡಬೇಕಾಗಿದೆ. ಗೋವಾ, ಕರ್ನಾಟಕ ಎರಡೂ ರಾಜ್ಯಗಳು ಕೋರ್ಟ್ ಮೊರೆ ಹೋಗಿವೆ. ಕಾನೂನು ಸೂಕ್ಷ್ಮತೆಗಳಿದ್ದು ಸೌಹಾ ರ್ದಯುತವಾಗಿ ಮಾತುಕತೆ ನಡೆಸಿ ಪರಿಹಾರಕ್ಕೆ ಒಂದೆಡೆ ಪ್ರಯತ್ನಿಸಲಾಗುತ್ತಿದೆ. ಮತ್ತೊಂದೆಡೆ ಕಾನೂನು ಹೋರಾಟಕ್ಕೂ ನಮ್ಮ ಸರ್ಕಾರ, ರಾಜ್ಯ ಬಿಜೆಪಿ ಸಿದ್ಧವಿದೆ ಎಂದರು. ಗೋವಾ ಮತ್ತು ಕರ್ನಾಟಕ ಎರಡೂ ರಾಜ್ಯಗಳಲ್ಲಿ ಬಿಜೆ ಪಿ ಸರ್ಕಾರ ಇದೆ ಎನ್ನುವ ಪ್ರಶ್ನೆಯೇ ಇಲ್ಲ. ಕಾನೂನು ಸೂಕ್ಷ್ಮತೆ ಇದ್ದು ಸೌಹಾರ್ದಯು ತವಾಗಿ ಬಗೆಹರಿಯಬೇಕು. ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಒಂದು ಸಹಮತ ಬರಬೇಕು ಎಂದು ಅವರು ಹೇಳಿದರು. 
 

Follow Us:
Download App:
  • android
  • ios