* ಶಾಸಕ ಯತ್ನಾಳ ವಿರುದ್ಧ ಕ್ರಮದ ಕುರಿತು ಮತ್ತೆ ಮಾತನಾಡುವುದಿಲ್ಲ* ರಾಜ್ಯದಲ್ಲಿ ಕೊರೋನಾ ಇನ್ನೂ ಪೂರ್ತಿಯಾಗಿ ಹೋಗಿಲ್ಲ* ಅಧಿವೇಶನ ಬೆಂಗಳೂರಲ್ಲಿ ನಡೆಸಬೇಕಾ, ಬೆಳಗಾವಿಯಲ್ಲಿ ನಡೆಸಬೇಕಾ? ಎಂಬುದರ ಕುರಿತು ಚರ್ಚೆಯಾಗಿಲ್ಲ

ಹುಬ್ಬಳ್ಳಿ(ಜು.11): ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. 

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಇನ್ನೂ ಪೂರ್ತಿಯಾಗಿ ಹೋಗಿಲ್ಲ. ಹೀಗಾಗಿ ಅಧಿವೇಶನವನ್ನು ಬೆಂಗಳೂರಲ್ಲಿ ನಡೆಸಬೇಕಾ, ಬೆಳಗಾವಿಯಲ್ಲಿ ನಡೆಸಬೇಕಾ? ಎಂಬುದರ ಕುರಿತು ಇನ್ನೂ ಚರ್ಚೆಯಾಗಿಲ್ಲ. ಆದರೆ ಈಗ ಅಧಿವೇಶನ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಚರ್ಚೆ ಮಾಡಿ ಎಲ್ಲಿ ನಡೆಸಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದರು.

ಮುಂದಿನ ಅಧಿವೇಶನ ಬೆಳಗಾವಿಯಲ್ಲಿ ನಡೆಸಲು ನಿರ್ದೇಶನ: ಹೊರಟ್ಟಿ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ವಿರುದ್ಧ ಪಕ್ಷ ಕ್ರಮ ಕೈಗೊಳ್ಳುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಕ್ಷದ ವರಿಷ್ಠರು ಈ ವಿಷಯದ ಬಗ್ಗೆ ಹೇಳಿದ್ದಾರೆ. ಅದರ ಬಗ್ಗೆ ಮತ್ತೆ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.