ಹುಬ್ಬಳ್ಳಿ(ನ.18): ಪದವಿ ಕಾಲೇಜು ಆರಂಭಿಕ ಹಂತದಲ್ಲಿ ವಿದ್ಯಾರ್ಥಿಗಳು ಬರುವುದು ಕಷ್ಟ. ದಿನ ಕಳೆದಂತೆ ಕಾಲೇಜ್‌ಗಳಿಗೆ ವಿದ್ಯಾರ್ಥಿಗಳು ಬರುತ್ತಾರೆ. ಈ ಬಗ್ಗೆ ಸಂದೇಹ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೋಟೆಲ್‌, ರೆಸ್ಟೋರೆಂಟ್‌ ಆರಂಭ ಮಾಡಿದಾಗಲೂ ಜನ ಬರುತ್ತಿರಲಿಲ್ಲ. ಇದೀಗ ಜನ ಸಹಜ ರೀತಿಯಲ್ಲಿ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಬರುತ್ತಿದ್ದಾರೆ. ಅದರಂತೆಯೇ ದಿನ ಕಳೆದಂತೆ ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುತ್ತಾರೆ ಎಂದರು.

ಸಿಎಂ ವಿವೇಚನೆಗೆ ಬಿಟ್ಟಿದ್ದು‌

ಸಚಿವ ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳಷ್ಟುಜನ ಸಚಿವಾಕಾಂಕ್ಷಿಗಳಿದ್ದಾರೆ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಬಿಡಬೇಕು ಅನ್ನುವುದು ಮುಖ್ಯಮಂತ್ರಿಗೆ ಬಿಟ್ಟಿದ್ದು. ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತೆ ಎಂದು ನುಡಿದರು.

ಬಿಜೆಪಿ ಶಾಸಕರಿಂದ ಆಯ್ತು ರೂಲ್ಸ್ ಬ್ರೇಕ್ : ಬರ್ತಡೆಯಲ್ಲಿ ಎಲ್ಲಾ ಮರೆತರು

ಡಿಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ಇಷ್ಟು ದಿನ ಸಂಪತ್‌ ರಾಜ್‌ ತಲೆ ಮರೆಸಿಕೊಂಡಿದ್ದರು. ಈಗ ಸಿಸಿಬಿ ಪೊಲೀಸರು ಸಂಪತ್‌ರಾಜ್‌ನನ್ನು ಬಂಧಿಸಿದ್ದಾರೆ. ಕಾನೂನು ರೀತಿಯಲ್ಲಿ ಕ್ರಮ ಜರುಗಿಸುತ್ತಾರೆ ಎಂದರು.

ಮಸ್ಕಿ ವಿಧಾನ ಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ಎಲ್ಲ ಚುನಾವಣೆ, ಉಪ ಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದೆ. ಹೀಗಾಗಿ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿ ಅಭೂತಪೂರ್ಣ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.