Asianet Suvarna News Asianet Suvarna News

ಕೋವಿಡ್‌ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಹಿಂಜರಿದರೆ ಕ್ರಮ: ಸಚಿವ ಶೆಟ್ಟರ್‌

ಸರ್ಕಾರದ ಆದೇಶದಂತೆ ಕೊರೋನಾ ನಿಯಂತ್ರಣಕ್ಕಾಗಿ ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್‌ ಆದೇಶವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು| ಜನತೆಯು ಕೊರೋನಾ ಬಗ್ಗೆ ಭಯಪಡುವದಕ್ಕಿಂತ ಎಚ್ಚರಿಕೆ ವಹಿಸಿ ಪಾಲಿಸಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ತಿಳಿಸಿದ ಸಚಿವ ಜಗದೀಶ ಶೆಟ್ಟರ್‌|

Minister Jagadish Shettar Talks Over Corona Treatment in Private Hospitals
Author
Bengaluru, First Published Jul 12, 2020, 7:19 AM IST

ಹುಬ್ಬಳ್ಳಿ(ಜು.12):  ಕೋವಿಡ್‌ ಚಿಕಿತ್ಸೆಗೆ ಪ್ರಸ್ತುತ ಹುಬ್ಬಳ್ಳಿ- ಧಾರವಾಡ ಮಹಾನಗರದ ಎಲ್ಲ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುತ್ತಿವೆ. ಈ ಜವಾಬ್ದಾರಿಯನ್ನು ಯಾವುದಾದರೂ ಆಸ್ಪತ್ರೆಗಳು ನಿರ್ಲಕ್ಷಿಸಿದರೆ ಅಂತಹ ಸಂಸ್ಥೆಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಇಲ್ಲಿನ ಸರ್ಕ್ಯೂಟ್‌ ಹೌಸಿನಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಜಿಲ್ಲೆಯ ಕೋವಿಡ್‌ ಪರಿಸ್ಥಿತಿ ಹಾಗೂ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ಮಾಡಿದರು. ಸರ್ಕಾರದ ಆದೇಶದಂತೆ ಕೊರೋನಾ ನಿಯಂತ್ರಣಕ್ಕಾಗಿ ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್‌ ಆದೇಶವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಜನತೆಯು ಕೊರೋನಾ ಬಗ್ಗೆ ಭಯಪಡುವದಕ್ಕಿಂತ ಎಚ್ಚರಿಕೆ ವಹಿಸಿ ಪಾಲಿಸಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ತಿಳಿಸಿದರು.

ಧಾರವಾಡದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 77 ಪ್ರಕರಣ ದೃಢ, ಹೆಚ್ಚಿದ ಆತಂಕ

ಜಿಲ್ಲಾಧಿಕಾರಿ ನಿತೇಶ ಪಾಟೀಲ, ಕಿಮ್ಸ್‌ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾಣಿ, ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ ಚವ್ಹಾಣ, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಶಹರ ತಹಸೀಲ್ದಾರ್‌ ಶಶಿಧರ ಮಾಡ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Follow Us:
Download App:
  • android
  • ios