ಅಥಣಿ(ಡಿ.02): ಮಹಾರಾಷ್ಟ್ರದಲ್ಲಿ ಕೆಲ ಗ್ರಾಮಗಳು ಕರ್ನಾಟಕಕ್ಕೆ ಬರುವ ಅರ್ಜಿ ಕೊಡುವ ಪರಿಸ್ಥಿತಿ ಬಂದಿದೆ. ಲಕ್ಷ್ಮಣ ಸವದಿ ಮಾಡಿದ ಬಸವೇಶ್ವರ ಏತನೀರಾವರಿಯಿಂದ ಮಹಾರಾಷ್ಟ್ರದ ಜನರು ಕರ್ನಾಟಕದತ್ತ ಒಲವು ತೋರಿಸುತ್ತಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ದಿಯಿಂದ ಹಿಂದೆ ಉಳಿಯಲು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಕಾರಣರಾಗಿದ್ದಾರೆ. ಇಬ್ಬರು ನಾಯಕರು ಉತ್ತರ ಕರ್ನಾಟಕದ ಬಗ್ಗೆ ಬಾರಿ ನಿರ್ಲಕ್ಷ್ಯ ತೋರಿಸಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಆರೋಪಿಸಿದ್ದಾರೆ. 

ಸೋಮವಾರ ನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಬಸವೇಶ್ವರ ಏತ ನೀರಾವರಿಗೆ ಕೊಂಚ ಹಣ ಕೊಟ್ಟಂತೆ ಮಾಡಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಎಲ್ಲ 15 ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಉಪಚುನಾವಣೆಯ ಎಲ್ಲ ಕ್ಷೇತ್ರಗಳಲ್ಲೂ ಗೆದ್ದು ಬಿಜೆಪಿ ಸಾಧನೆ ಮಾಡಲಿದೆ. ಈ ಭಯದಿಂದ ತಲೆಗೊಬ್ಬರಂತೆ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ. ಡಿ.9 ರ ಬಗ್ಗೆ ಹೇಳಲು ಶುರು ಮಾಡಿದ್ದಾರೆ ಎಂದು ಹೇಳಿದ್ದಾರೆ. 

ಸಿದ್ದರಾಮಯ್ಯ, ಕುಮಾರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ, ತಿರುಕನ ಕನಸು ಕಾಣುತ್ತಿದ್ದಾರೆ. ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಈ ಜನ್ಮದಲ್ಲಿ ಸಿಎಂ ಆಗಲು ಸಾಧ್ಯವಿಲ್ಲ. ಬಿಜೆಪಿ ಸ್ಥಿರ ಹಾಗೂ ಸುಭದ್ರ ಸರ್ಕಾರವನ್ನ ನೀಡಲಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.