ಲಾಕ್‌ಡೌನ್‌ನಿಂದ ಸಾಕಷ್ಟು ಕಾರ್ಮಿಕರಿಗೆ ಉದ್ಯೋಗ ಇಲ್ಲದಂತಾಗಿದೆ| ಈ ಹಿನ್ನೆಲೆ ರಾಜ್ಯ ಸರ್ಕಾರ ಕಾರ್ಮಿಕರಿಗೆ ಅನುಕೂಲವಾಗಲೆಂದು ವಿಶೇಷ ಪ್ಯಾಕೇಜ್‌ ಘೋಷಿಸಿದೆ|ಕೆಲ ಫಲಾನುಭವಿಗಳಿಗೆ ಇನ್ನೂ ಪರಿಹಾರದ ಹಣ ಬಂದಿಲ್ಲ| ಕೆಲವೊಂದು ತಾಂತ್ರಿಕ ಕಾರಣದಿಂದ ಬಿಡುಗಡೆಯಾಗಿರಲಿಕ್ಕಿಲ್ಲ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ| ಫಲಾನುಭವಿಗಳಿಗೆ ಶೀಘ್ರದಲ್ಲಿ ಪರಿಹಾರ ದೊರೆಯಲಿದೆ|ಮುಖ್ಯಮಂತ್ರಿಗಳು ಕೊಟ್ಟಮಾತು ತಪ್ಪುವುದಿಲ್ಲ|

ಹುಬ್ಬಳ್ಳಿ(ಮೇ.28): ಲಾಕ್‌ಡೌನ್‌ ಹಿನ್ನೆಲೆ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ನ ಹಣ ಶೀಘ್ರದಲ್ಲೇ ಫಲಾನುಭವಿಗಳ ಕೈಸೇರಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ನಿಂದ ಸಾಕಷ್ಟು ಕಾರ್ಮಿಕರಿಗೆ ಉದ್ಯೋಗ ಇಲ್ಲದಂತಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಕಾರ್ಮಿಕರಿಗೆ ಅನುಕೂಲವಾಗಲೆಂದು ವಿಶೇಷ ಪ್ಯಾಕೇಜ್‌ ಘೋಷಿಸಿದೆ. ಕೆಲ ಫಲಾನುಭವಿಗಳಿಗೆ ಇನ್ನೂ ಪರಿಹಾರದ ಹಣ ಬಂದಿಲ್ಲ. ಕೆಲವೊಂದು ತಾಂತ್ರಿಕ ಕಾರಣದಿಂದ ಬಿಡುಗಡೆಯಾಗಿರಲಿಕ್ಕಿಲ್ಲ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಫಲಾನುಭವಿಗಳಿಗೆ ಶೀಘ್ರದಲ್ಲಿ ಪರಿಹಾರ ದೊರೆಯಲಿದೆ. ಮುಖ್ಯಮಂತ್ರಿಗಳು ಕೊಟ್ಟಮಾತು ತಪ್ಪುವುದಿಲ್ಲ ಎಂದರು.

ಲಾಕ್‌ಡೌನ್‌ ಎಫೆಕ್ಟ್‌: ಮದುವೆ ಮುಂದೂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಬೇರೆ ಬೇರೆ ರಾಜ್ಯಗಳಲ್ಲಿ ಸರ್ಕಾರಿ ನೌಕರರ ವೇತನ ಕಡಿತಗೊಳಿಸಲಾಗಿದೆ. ರಾಜ್ಯದಲ್ಲಿ ಹಣಕಾಸು ಇಲಾಖೆ ಮುಖ್ಯಮಂತ್ರಿಗಳ ಬಳಿಯಿದ್ದು, ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಪ್ರಶ್ನಿಗೆ ಉತ್ತರಿಸಿದರು.