Asianet Suvarna News Asianet Suvarna News

ಎರಡು ಹಂತದ ಪಂಚಾಯತರಾಜ್ ವ್ಯವಸ್ಥೆ ಸೂಕ್ತ: ಸಚಿವ ಈಶ್ವರಪ್ಪ

140 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಅಧ್ಯಕ್ಷ, ಉಪಾಧ್ಯಕ್ಷರು,ಸ್ಥಾಯಿ ಸಮಿತಿಗಳ ಅಧ್ಯಕ್ಷರ ನೂತನ ಕೊಠಡಿಗಳ ಕಟ್ಟಡ ಉದ್ಘಾಟಿಸಿದ ಸಚಿವ ಕೆ.ಎಸ್.ಈಶ್ವರಪ್ಪ| ಸಂವಿಧಾನದಲ್ಲಿ ಮೂರು ಹಂತದ ಪಂಚಾಯತರಾಜ್ ವ್ಯವಸ್ಥೆ ಸೂಚಿಸಿರುವುದರಿಂದ ಅನುಷ್ಠಾನ ಅನಿವಾರ್ಯ| 

Minister K S Eshwarappa Says Two Tier Panchayat Raj System Suitable grg
Author
Bengaluru, First Published Jan 23, 2021, 1:12 PM IST | Last Updated Jan 23, 2021, 1:11 PM IST

ಧಾರವಾಡ(ಜ.23): ರಾಜ್ಯದಲ್ಲಿ ಎರಡು ಹಂತದ ಪಂಚಾತರಾಜ್ ವ್ಯವಸ್ಥೆ ಜಾರಿಗೊಳಿಸುವುದು ಸೂಕ್ತ ಎಂಬುದು ನನ್ನ ವೈಯಕ್ತಿಕವಾಗಿ ಅಭಿಪ್ರಾಯವಾಗಿದೆ. ಈ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸಂವಿಧಾನ ತಿದ್ದುಪಡಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸುವ ಉದ್ದೇಶವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 

ಇಂದು(ಶನಿವಾರ) ನಗರದ ಜಿಲ್ಲಾ ಪಂಚಾಯತ ಆವರಣದಲ್ಲಿ 140 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಅಧ್ಯಕ್ಷ, ಉಪಾಧ್ಯಕ್ಷರು,ಸ್ಥಾಯಿ ಸಮಿತಿಗಳ ಅಧ್ಯಕ್ಷರ ನೂತನ ಕೊಠಡಿಗಳ ಕಟ್ಟಡ ಉದ್ಘಾಟಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. 

ಧಾರವಾಡ ಬಳಿ ಭೀಕರ ಆಕ್ಸಿಡೆಂಟ್‌: ಅಪಘಾತ ಕುರಿತು ವರದಿ ಕೇಳಿದ ಸುಪ್ರೀಂಕೋರ್ಟ್

ಮೂರು ಹಂತದ ಪಂಚಾಯತ ರಾಜ್ ವ್ಯವಸ್ಥೆ ಬದಲಿಗೆ ಎರಡು ಹಂತದ ವ್ಯವಸ್ಥೆ ಜಾರಿಗೊಳ್ಳಬೇಕು ಎಂಬ ಅಭಿಪ್ರಾಯವಿದೆ. ಇದಕ್ಕೆ ಸಂಪೂರ್ಣ ಸಹಮತವಿದೆ. ಸಂವಿಧಾನದಲ್ಲಿ ಮೂರು ಹಂತದ ಪಂಚಾಯತರಾಜ್ ವ್ಯವಸ್ಥೆ ಸೂಚಿಸಿರುವುದರಿಂದ ಅನುಷ್ಠಾನ ಅನಿವಾರ್ಯವಾಗಿದೆ. ಇದನ್ನು ಬದಲಾಯಿಸಲು ಕೋರಿ ರಾಜ್ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ವಿಧಾನಕ್ಕೆ ತಿದ್ದುಪಡಿಯಾದರೆ ಮಾತ್ರ ಬದಲಾವಣೆ ಸಾಧ್ಯ ಎಂದು ತಿಳಿಸಿದ್ದಾರೆ. 

ಬೃಹತ್, ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಶಾಸಕರಾದ ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ, ಜಿಲ್ಲಾ ಪಂಚಾಯತ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ.ಸಿಇಓ ಡಾ.ಬಿ.ಸುಶೀಲಾ, ಸದಸ್ಯರಾದ ಚೈತ್ರಾ ಗುರುಪಾದಪ್ಪ ಶಿರೂರ, ರೇಣುಕಾ ಇಬ್ರಾಹಿಂಪುರ,ಚನ್ನಬಸಪ್ಪ ಮಟ್ಟಿ,ಕರಿಯಪ್ಪ ಮಾದರ ಮತ್ತಿತರರು ಇದ್ದರು.
 

Latest Videos
Follow Us:
Download App:
  • android
  • ios