ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ: ಹಾವೇರಿ ವೈದ್ಯರ ಕಾರ್ಯಕ್ಕೆ ಸಚಿವ ಸುಧಾಕರ್‌ ಶ್ಲಾಘನೆ

ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾದ ವೈದ್ಯರು| ಇಡೀ ಸಮಾಜಕ್ಕೆ ಮಾದರಿಯಾದ ಹಾವೇರಿ ಜಿಲ್ಲೆಯ 570 ಖಾಸಗಿ ವೈದ್ಯರು| ಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದಿರುವ ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಆತ್ಯಂತ ಶ್ಲಾಘನೀಯ: ಸಚಿವ ಸುಧಾಕರ್‌|

Minister K Sudhakar Praises Haveri Doctors Work for Free Treatment to Corona Patients

ಹಾವೇರಿ(ಆ.02): ಸುವರ್ಣ ನ್ಯೂಸ್ ವರದಿಗೆ ಸ್ಪಂದಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌ ಅವರು ಕೋವಿಡ್ ಸೋಂಕಿತರಿಗೆ ಉಚಿವ ಸೇವೆ ನೀಡಲು ಮುಂದಾಗಿರುವ ಖಾಸಗಿ ವೈದ್ಯರ ಕಾರ್ಯಕ್ಕೆ ಶ್ಲಾಘನೀಯ ವ್ಯಕ್ತಪಡಿಸಿದ್ದಾರೆ. 

"

ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಸಚಿವ ಕೆ. ಸುಧಾಕರ್‌ ಅವರು, ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿ ಜಿಲ್ಲೆಯ 570 ಖಾಸಗಿ ವೈದ್ಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದಿರುವ ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಆತ್ಯಂತ ಶ್ಲಾಘನೀಯ ಎಂದು ಹೇಳಿದ್ದಾರೆ.

 

ಈಗಾಗಲೇ ಹಾವೇರಿಯ ಜಿಲ್ಲಾ ಕೋವಿಡ್ ಸೆಂಟರ್‌ನಲ್ಲಿ 8 ಖಾಸಗಿ ವೈದ್ಯರು ಸೇವೆಯನ್ನ ಅರಂಭಿಸಿದ್ದಾರೆ. ಈ ಬಗ್ಗೆ ಮಾತನಾಡಿದ ವೈದ್ಯರು ಸರ್ಕಾರದಿಂದ ಯಾವ ಪಲಾಪೇಕ್ಷೆ ಬಯಸದೇ ನಾವು ಸೇವೆ ಮಾಡುತ್ತೇವೆ. ನಮಗೆ ಹಣ ಬೇಡ ಸೋಂಕಿತರ ಸೇವೆ ಮಾಡಲು ಅವಕಾಶ ನೀಡಿ. ಖಾಸಗಿ ವೈದ್ಯರ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ ಕೋವಿಡ್ ಸೆಂಟರ್‌ಗಳಲ್ಲಿ ಸೇವೆ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ.
 

Latest Videos
Follow Us:
Download App:
  • android
  • ios