Asianet Suvarna News Asianet Suvarna News

ಡಬಲ್‌ ಎಂಜಿನ್‌ ಸರ್ಕಾರದಿಂದ ಅಭಿವೃದ್ಧಿ ಸ್ಪರ್ಶ: ಸಚಿವ ಸುಧಾಕರ್‌

ರೈತರ ಮಕ್ಕಳು ಸೇರಿದಂತೆ 11 ಲಕ್ಷ ಮಕ್ಕಳಿಗೆ ಕಾಮನ್‌ಮ್ಯಾನ್‌ ಸಿಎಂ ಬಸವರಾಜ ಬೊಮ್ಮಾಯಿಯವರು ವಿದ್ಯಾನಿಧಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶೌಚಾಲಯದ ಬಗ್ಗೆ ಮಾತನಾಡಿದಾಗ ‘ಏನು ಮಹಾ’ ಎಂದು ಹಲವರು ಟೀಕಿಸಿದ್ದರು. ಆದರೆ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಿ ಮಹಿಳೆಯರ ಘನತೆ ಎತ್ತಿ ಹಿಡಿಯಲಾಗಿದೆ. ಮಹಿಳೆಯ ರಿಗೆ ಉಚಿತ ಗ್ಯಾಸ್‌ ಸಂಪರ್ಕ ನೀಡಿ ಅವರ ಕಷ್ಟ ತಪ್ಪಿಸಲಾಗಿದೆ: ಸಚಿವ ಸುಧಾಕರ್‌ 

Minister K Sudhakar Talks Over BJP Government grg
Author
First Published Mar 28, 2023, 6:02 AM IST

ಚಿಕ್ಕಬಳ್ಳಾಪುರ(ಮಾ.28):  ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇರುವುದರಿಂದ ಹೆಚ್ಚು ಅನುದಾನ ಬಂದು ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ. ಡಬಲ್‌ ಎಂಜಿನ್‌ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅಭಿವೃದ್ಧಿಯ ಸ್ಪರ್ಶ ದೊರೆತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ನಗರದಲ್ಲಿ ಆಯೋಜಿಸಿದ್ದ ಕೇಂದ್ರ, ರಾಜ್ಯ ಸರ್ಕಾರಗಳ ಫಲಾನುಭವಿಗಳ ಬೃಹತ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಜನರ ಪ್ರೀತಿ, ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಸರ್ಕಾರ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆಯೆಂದರು.

ನಂದಿ ಮೆಡಿಕಲ್‌ ಕಾಲೇಜು ಡಾ.ಸುಧಾಕರ್‌ ಹೋರಾಟದ ಫಲ: ಸಿಎಂ

ರೈತರ ಮಕ್ಕಳು ಸೇರಿದಂತೆ 11 ಲಕ್ಷ ಮಕ್ಕಳಿಗೆ ಕಾಮನ್‌ಮ್ಯಾನ್‌ ಸಿಎಂ ಬಸವರಾಜ ಬೊಮ್ಮಾಯಿಯವರು ವಿದ್ಯಾನಿಧಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶೌಚಾಲಯದ ಬಗ್ಗೆ ಮಾತನಾಡಿದಾಗ ‘ಏನು ಮಹಾ’ ಎಂದು ಹಲವರು ಟೀಕಿಸಿದ್ದರು. ಆದರೆ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಿ ಮಹಿಳೆಯರ ಘನತೆ ಎತ್ತಿ ಹಿಡಿಯಲಾಗಿದೆ. ಮಹಿಳೆಯ ರಿಗೆ ಉಚಿತ ಗ್ಯಾಸ್‌ ಸಂಪರ್ಕ ನೀಡಿ ಅವರ ಕಷ್ಟ ತಪ್ಪಿಸಲಾಗಿದೆ ಎಂದು ಸಚಿವ ಸುಧಾಕರ್‌ ತಿಳಿಸಿದರು.

ವಿವಿಧ ಯೋಜನೆಗಳಿಗೆ ಚಾಲನೆ: ಇದೇ ವೇದಿಕೆಯಲ್ಲಿ ಮಹಿಳೆಯರಿಗಾಗಿ ಮೀಸಲಾದ ಮಹಿಳಾ ಸ್ವಾಸ್ಥ್ಯ ಕ್ಲಿನಿಕ್‌-ಆಯುಷ್ಮತಿ ಕ್ಲಿನಿಕ್‌ಗಳಿಗೆ ಚಾಲನೆ ದೊರೆಯಿತಲ್ಲದೇ, ಶ್ರವಣ ದೋಷ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರೂಪಿಸಿರುವ ಕಾಕ್ಲಿಯರ್‌ ಇಂಪ್ಲಾಂಟ್‌ ಯೋಜನೆ ಹಾಗೂ ನಮ್ಮ ಕ್ಲಿನಿಕ್‌ ಯೋಜನೆಗಳಿಗೆ ವೇದಿಕೆಯಲ್ಲಿ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ಈ ವೇಳೆ ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಿಂದ ಆಯುಷ್ಮತಿ ಕ್ಲಿನಿಕ್‌ ಸೇವೆಗಳ ಬಗ್ಗೆ ಸಿಎಂ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಸುಧಾಕರ್‌ ರೋಗಿಗಳೊಂದಿಗೆ ಸಂವಾದ ನಡೆಸಿದರು.

ಕೊನೆಗೂ ಶಂಕರ್ ನಾಗ್ ಕನಸು ನನಸು ಮಾಡಿದ ಸಿಎಂ: ₹93.40 ಕೋಟಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್‌ ವೇ!

ಬಿಜೆಪಿ ಸರ್ಕಾರ ಪ್ರಜೆಗಳ ಸರ್ಕಾರ. ನಮ್ಮ ಸರ್ಕಾರದಿಂದ ಭರವಸೆಯಲ್ಲಿ ಇಲ್ಲದ ಹೊಸ ಯೋಜನೆಗಳನ್ನು ಕೂಡ ನೀಡಲಾಗಿದೆ. ಹಿಂದೆ ನೀರಾವರಿ ಸಚಿವರಾಗಿದ್ದ ಬೊಮ್ಮಾಯಿ ಅವರು ಎತ್ತಿನಹೊಳೆ ಯೋಜನೆ ರೂಪಿಸಿದ್ದು, ಅನೇಕರಿಗೆ ಗೊತ್ತೇ ಇಲ್ಲ. ಈ ಭಾಗದ ಜನರಿಗೆ ಕುಡಿಯುವ ನೀರು ನೀಡಲು ಇಂತಹ ಮಹತ್ವದ ಯೋಜನೆ ನೀಡಲಾಗಿದೆ ಅಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. 

ಎತ್ತಿನಹೊಳೆ ಯೋಜನೆ ಜಾರಿಗೆ ಬದ್ಧ: ಸಚಿವ

ಎತ್ತಿನಹೊಳೆ ಯೋಜನೆಯನ್ನು ಶರವೇಗದಲ್ಲಿ ಅನುಷ್ಠಾನಗೊಳಿಸಲು ನಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಅಲ್ಲದೆ, 13 ಸಾವಿರ ಕೋಟಿ ಯೋಜನೆಯನ್ನು ಪರಿಷ್ಕೃತ ಗೊಳಿಸಿ 25 ಸಾವಿರ ಕೋಟಿಗೆ ಹೆಚ್ಚಿಸಲಾಗಿದೆ. ಸರಿ ಸುಮಾರು 2500 ರಿಂದ 3000 ಸಾವಿರ ಕೋಟಿ ಕಾಮಗಾರಿ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಸಿಎಂ ಆದೇಶ ನೀಡಿ ದ್ದಾರೆ. ಯೋಜನೆಗೆ ಈಗಾಗಲೇ ಸುಮಾರು 360 ಕೊಟಿ ರು. ನೀಡಲಾಗಿದೆಯೆಂದರು.

Follow Us:
Download App:
  • android
  • ios