ಬ್ರಿಟನ್ ವೈರಸ್ ಬಗ್ಗೆ ಯಾವುದೇ ಆತಂಕ ಇಲ್ಲ: ಸಚಿವ ಸುಧಾಕರ್
ಬ್ರಿಟನ್ ಸೋಂಕು ಖಚಿತವಾದಲ್ಲಿ, ಸರ್ಕಾರವೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದೆ| ರೂಪಾಂತರ ವೈರಸ್ ಹರಡಲು ಅವಕಾಶವಿಲ್ಲ| ವೈರಸ್ ವಿರುದ್ಧ ಹೋರಾಡುತ್ತಿರುವ ಸರ್ಕಾರ ಹಾಗೂ ಅಧಿಕಾರಿಗಳು|
ದೊಡ್ಡಬಳ್ಳಾಪುರ(ಜ.26): ಬ್ರಿಟನ್‌ನ ರೂಪಾಂತರ ಕೊರೋನಾ ವೈರಸ್‌ಗೆ ಒಳಗಾಗಿದ್ದ ರಾಜ್ಯದ 16 ಜನ ಗುಣಮುಖರಾಗಿ ಮನೆಗೆ ತೆರಳಿದ್ದು, ಸದ್ಯಕ್ಕೆ ಯಾವುದೇ ಆತಂಕವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್ ಮೂಲದಿಂದ ಬಂದ ವಿಮಾನ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿ ಸೋಂಕು ಖಚಿತವಾದಲ್ಲಿ, ಸರ್ಕಾರವೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದೆ. ರೂಪಾಂತರ ವೈರಸ್ ಹರಡಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಕೊರೋನಾ ಲಸಿಕೆ ಸಂಪೂರ್ಣ ಸುರಕ್ಷಿತ: ಸಚಿವ ಸುಧಾಕರ್
ಸರ್ಕಾರ ಹಾಗೂ ಅಧಿಕಾರಿಗಳು ಕ್ರಿಯಾಶೀಲರಾಗಿ ವೈರಸ್ ವಿರುದ್ಧ ಹೋರಾಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಂದ ನಂತರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿಗೂ 2ನೇ ಹಂತದಲ್ಲಿ ಕೊರೋನಾ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.