ಬೆಂಗಳೂರು[ಫೆ.15]: ವೈದ್ಯಕೀಯ ಸೀಟು ಬ್ಲಾಕಿಂಗ್‌ ದಂಧೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ದಂಧೆ ನಡೆಯದಂತೆ ಕಡಿವಾಣ ಹಾಕಲು ಎಲ್ಲ ರೀತಿಯ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ಸೀಟು ಬ್ಲಾಕಿಂಗ್‌ ದಂಧೆ ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಶಂಕರ್‌ ಬಿದರಿ ಅವರು ಸಾಮಾಜಿಕ ಜಾಲತಾಣದಲ್ಲಿ ಆರೋಪ ಮಾಡಿದ್ದಾರೆ. ಶಂಕರ್‌ ಬಿದರಿ ಅವರು ನನಗೂ ಆತ್ಮೀಯರು. ಹೀಗಾಗಿ ಅವರು ನೇರವಾಗಿಯೇ ನನ್ನ ಗಮನಕ್ಕೆ ತರಬಹುದಿತ್ತು. ಆದರೂ ನಾನೇ ಅವರ ಜೊತೆ ಮಾತನಾಡಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವೈದ್ಯಕೀಯ ಸೀಟು ಬ್ಲಾಕಿಂಗ್‌ನಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಅಂತಹ ದಂಧೆ ನಡೆಯುತ್ತಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಇದಕ್ಕೆ ಸಂಪೂರ್ಣ ಕಡಿವಾಣ ಹಾಕುತ್ತೇನೆ. ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳು ಮುಂದುವರೆಯಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಖಾಸಗಿ ಮೆಡಿಕಲ್‌ ಕಾಲೇಜುಗಳ ವೈದ್ಯಕೀಯ ಸೀಟು ಬ್ಲಾಕಿಂಗ್‌ನಿಂದ ಸಾವಿರಾರು ಕೋಟಿ ರು. ಅವ್ಯವಹಾರ ನಡೆಯುತ್ತಿದೆ. ಈ ಬಗ್ಗೆ ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವು ಕಳೆದ ಸೆಪ್ಟೆಂಬರ್‌ನಲ್ಲಿ ಸರ್ಕಾರಕ್ಕೆ ಪತ್ರ ಬರೆದಿದೆ. ಆದರೂ ಸರ್ಕಾರ, ಆದಾಯ ತೆರಿಗೆ ಇಲಾಖೆ ಮೌನ ವಹಿಸಿರುವುದು ಏಕೆ ಎಂದು ಶಂಕರ ಬಿದರಿ ಅವರು ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದರು.

#NewsIn100Seconds ಈ ಕ್ಷಣದ ಪ್ರಮುಖ ಸುದ್ದಿಗಳು

"