Mandya: ಕೆಂಪೇಗೌಡ್ರ ಹೆಸರು ಅಜರಾಮರ: ಸಚಿವ ನಾರಾಯಣಗೌಡ

ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಬೆಂಗಳೂರು ಅದ್ವಿತೀಯ ಸಾಧನೆಗೈದಿದೆ ಎಂದರೆ ಅದರ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. 

Minister KC Narayana Gowda Talks Over Kempegowda At Mandya gvd

ಮಂಡ್ಯ (ಅ.30): ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಬೆಂಗಳೂರು ಅದ್ವಿತೀಯ ಸಾಧನೆಗೈದಿದೆ ಎಂದರೆ ಅದರ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. ನಗರದ ಕಾಳಿಕಾಂಭ ದೇವಾಲಯದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣ ಅಂಗವಾಗಿ ಮಂಡ್ಯ ಜಿಲ್ಲೆಯ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದಲ್ಲಿ ಪಾಲ್ಕೊಂಡು ಮಾತನಾಡಿ, ಉದ್ಯೋಗ ಅರಸಿ ಬಂದವರಿಗೆ ಕೆಲಸದ ಜೊತೆಗೆ ಜೀವನ ಕಲ್ಪಿಸಿಕೊಟ್ಟಬೆಂಗಳೂರು ಬಹು ಎತ್ತರಕ್ಕೆ ಬೆಳೆಯಲು ಕೆಂಪೇಗೌಡರು ಕಾರಣ ಎಂದರು. 

ಸಣ್ಣ ಪುಟ್ಟ ಗ್ರಾಮಗಳಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿ ಜೀವನ ನಡೆಸುತ್ತಿರುವ ಜನರು ಬಹಳಷ್ಟಿದ್ದಾರೆ. ಸಿಲಿಕಾನ್‌ ಸಿಟಿ ಎಂಬ ಗರಿಮೆಗೆ ಪಾತ್ರವಾಗಿರುವ ಬೆಂಗಳೂರಿನಲ್ಲಿ ವಿಶ್ವ ಹೂಡಿಕೆದಾರರ ಸಮ್ಮೇಳನ ಆಯೋಜನೆಯಾಗುತ್ತಿರುವುದು ಬೆಂಗಳೂರಿನ ಹಿರಿಮೆಯನ್ನು ಸಾಬೀತು ಪಡಿಸುತ್ತದೆ ಎಂದರು. ಜನವಸತಿ ಪ್ರದೇಶದಲ್ಲಿ ವಾಸಿಸುವ ನಾಗರಿಕರ ಕುಲಕಸುಬಿಗೆ ಅಗತ್ಯವಾದ ಅನುಕೂಲ ಕಲ್ಪಿಸಿ ಬೆಂಗಳೂರು ನಗರವನ್ನು ಅಂದು ಕೆಂಪೇಗೌಡರು ನಿರ್ಮಿಸಿದರು. ಇಂದು ವಿಶ್ವ ವಿಖ್ಯಾತಿ ಹೊಂದಿರುವ ಬೆಂಗಳೂರನ್ನು ಪ್ರತಿಷ್ಠಾಪಿಸಿದ ನಾಡಪ್ರಭು ಕೆಂಪೇಗೌಡರ ಹೆಸರು ಜಗತ್ತಿನಲ್ಲಿ ಅಜರಾಮರವಾಗಿದೆ ಎಂದು ಬಣ್ಣಿಸಿದರು. 

ಬೆಂಗಳೂರು ನಿರ್ಮಾಣಕ್ಕೆ ಅಂಕಿತ ಹಾಕಿದ ನಾಡಪ್ರಭು ಕೆಂಪೇಗೌಡರು: ಸಚಿವ ಗೋಪಾಲಯ್ಯ

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ಮಾತನಾಡಿ, ಮಾದರಿ ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ದೂರದೃಷ್ಟಿಕಾರಣವಾಗಿದೆ. ಇದೇ ರೀತಿ ಸಚಿವರು ಮಂಡ್ಯ ಜಿಲ್ಲೆಯ ಅಭ್ಯುದ್ಯಯಕ್ಕೆ ಅಂಕಿತ ಹಾಕಲಿ ಎಂದು ಆಗ್ರಹಿಸಿದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ಶ್ರೀನಿವಾಸ್‌ ಮಾತನಾಡಿ, ಕಾಳಿಕಾಂಭ ದೇವಾಲಯ ಶಕ್ತಿ ದೇಗುಲ. ಇಲ್ಲಿ ಆರಂಭಿಸುವ ಕೆಲಸ ಕಾರ್ಯಗಳಿಗೆ ಯಶಸ್ಸು ಸಿಗುತ್ತದೆ. ಜಿಲ್ಲೆಯ 1500ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಮಣ್ಣು ಸಂಗ್ರಹಿಸುವ ಕಾರ್ಯ ಯಶಸ್ವಿಯಾಗಲಿ ಎಂದು ಹಾರೈಸಿದರು.

ಶಿವಮೊಗ್ಗ ಉಸ್ತುವಾರಿ ಸಚಿವನಾಗಿದ್ದಕ್ಕೆ ಬೇಸರವಿಲ್ಲ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವನಾಗಿರುವುದಕ್ಕೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗಿದೆ. ಶಿವಮೊಗ್ಗ ಜಿಲ್ಲೆಯ ರೀತಿ ಮಂಡ್ಯ ಜಿಲ್ಲೆ ಕೂಡ ಅಭಿವೃದ್ಧಿ ಆಗಬೇಕು ಎಂಬುದು ನನ್ನ ಕನಸು. 

ಮೀಸಲಾತಿ ಹೆಚ್ಚಳಕ್ಕಾಗಿ ಸಮುದಾಯಗಳು ಕೇಳುವುದು ತಪ್ಪಲ್ಲ: ಸಿದ್ದರಾಮಯ್ಯ

ಹಾಗಾಗಿ ನನ್ನ ಕ್ಷೇತ್ರ, ಜಿಲ್ಲೆಯ ಅಭಿವೃದ್ಧಿಗೆ ಸಮಯ ಕೊಡಬೇಕಿದೆ ಎಂಬ ಅರ್ಥದಲ್ಲಿ ನಾನು ಮಾತನಾಡಿದ್ದೇನೆಯೇ ಹೊರತು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಕ್ಕೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಉತ್ತರಿಸಿದರು.ಜೆಡಿಎಸ್‌ ಪಂಚರಥ ಯಾತ್ರೆ ಕುರಿತು ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್‌ ಅ​ಧಿಕಾರಕ್ಕೆ ಬರುತ್ತದೆ ಎಂಬುದು ಕನಸಿನ ಮಾತು ಎಂದರು. ಇನ್ನು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್‌ ಜೋಡೋ ಯಾತ್ರೆಯಿಂದಲೂ ಬಿಜೆಪಿಗೆ ಯಾವುದೇ ಹಾನಿ ಇಲ್ಲ ,ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios