ಮಂಡ್ಯ(ಜೂ.07): ಕೆಆರ್‌ಎಸ್‌ ಆಣೆಕಟ್ಟೆ ಬಿರುಕು ಬಿಟ್ಟಿದೆ ಎಂಬ ಸಂಸದೆ ಸುಮಲತಾ ಅಂಬರೀಶ್‌ ಅವರು ನೀಡಿರುವ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಅಣೆಕಟ್ಟೆ ಬಿರುಕು ಬಿಟ್ಟಿಲ್ಲ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್‌ ಕೃಷ್ಣರಾಜಸಾಗರ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ವಿಚಾರವಾಗಿ ನಗರದಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಅಣೆಕಟ್ಟೆ ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ. 

ಕೆಆರ್‌ಎಸ್‌ ಬಿರುಕು ಬಿಟ್ಟಿರುವ ವಿಷಯ ಸತ್ಯ : ಸುಮಲತಾ

ಆದಾಗ್ಯೂ ಅಣೆಕಟ್ಟೆ ಹಿತದೃಷ್ಟಿಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಅದಾಗ್ಯೂ ಆಣೆಕಟ್ಟೆ ಹಿತದೃಷ್ಟಿಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.