Asianet Suvarna News Asianet Suvarna News

ಚಿಕ್ಕಮಗಳೂರು: ರೈತರ ಹವಾಲು ಆಲಿಸಿ, ಸರ್ಕಾರದಿಂದ ಶೀಘ್ರ ಪರಿಹಾರವೆಂದ ಸಚಿವ ಜಾರ್ಜ್

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬರ ಪರಿಶೀಲನೆ ಕಾರ್ಯ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರ ಎನ್ ಡಿ ಆರ್ ಎಫ್ ಅನುದಾನ ಬಿಡುಗಡೆಗೊಳಿಸಿದ ನಂತರ ನೆರವು ಸಿಗಲಿದೆ. ರಾಜ್ಯ ಸರ್ಕಾರದಿಂದಲೂ ನೆರವು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ಸಚಿವ ಕೆ.ಜೆ.ಜಾರ್ಜ್ 

Minister KJ George visited Drought Areas in Chikkamagaluru grg
Author
First Published Nov 29, 2023, 10:45 PM IST

ವರದಿ : ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ನ.29):  ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಚಿಕ್ಕಮಗಳೂರು ಜಿಲ್ಲೆಯ ಬರ ಪ್ರದೇಶಗಳಿಗೆ ಭೇಟಿ ನೀಡಿ ಅವಲೋಕನನಡೆಸಿದರು. ರೈತರ ಹೊಲ, ಗೆದ್ದಗಳಿಗೆ  ಭೇಟಿ ನೀಡಿ ರೈತರ ಹವಾಲುಗಳನ್ನು ಆಲಿಸಿದರು. ಸಖರಾಯಪಟ್ಟಣದ ಬ್ರಹ್ಮಸಮುದ್ರ, ಕಡೂರು ತಾಲೂಕಿನ ಕಾಮೇನಹಳ್ಳಿ ತರಿಕೆರೆ ತಾಲೂಕಿನ ತಮಟದಹಳ್ಳಿ ಇನ್ನಿತರೆ ಭಾಗಗಳಿಗೆ ಸ್ಥಳೀಯ ಶಾಸಕರುಗಳೊಂದಿಗೆ ಭೇಟಿ ನೀಡಿದ ಸಚಿವರು ಮಳೆ ಕೊರತೆಯಿಂದಾಗಿ ಸಂಭವಿಸಿರುವ ಬೆಳೆ ಹಾನಿ ಬಗ್ಗೆ ಪರಿಶೀಲಿಸಿದರು.

ರೈತರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು : 

ಬರ ಪ್ರದೇಶಕ್ಕೆ ಭೇಟಿ ನೀಡಿದ ಸಮಯದಲ್ಲಿ ರೈತರೊಂದಿಗೆ ಸಮಾಲೋಚನೆ ನಡೆಸಿದ ಸಚಿವ ಕೆ.ಜೆ.ಜಾರ್ಜ್ ಅವರ ಸಮಸ್ಯೆಗಳನ್ನು ಆಲಿಸಿ, ವಸ್ತು ಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬರ ಪರಿಶೀಲನೆ ಕಾರ್ಯ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರ ಎನ್ ಡಿ ಆರ್ ಎಫ್ ಅನುದಾನ ಬಿಡುಗಡೆಗೊಳಿಸಿದ ನಂತರ ನೆರವು ಸಿಗಲಿದೆ. ರಾಜ್ಯ ಸರ್ಕಾರದಿಂದಲೂ ನೆರವು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆಯಲ್ಲಿ ರೈತರು ಈ ಭಾಗದಲ್ಲಿ ರಾಗಿ , ಮೆಕ್ಕೆಜೋಳಸೇರಿದಂತೆ ಪ್ರಮುಖ ಬೆಳೆಗಳಿಗೆ ಮಳೆ ಕೊರತೆಯಿಂದ ಹಾನಿಗೆ ಒಳಾಗಿದ್ದು ಶೀಘ್ರವೇ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಪೂಜೆ ವೇಳೆ ಅಲುಗಾಡುತ್ತೆ 16 ಅಡಿಯ ಹುತ್ತ ..ಕಾಫಿನಾಡಲ್ಲೊಂದು ವಿಸ್ಮಯ ಉತ್ಸವ..!

ಪರಿಹಾರದ ಮೊತ್ತವನ್ನು ಹೆಚ್ಚಿಸುವಂತೆ ಮನವಿ : 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಬರ ಅಧ್ಯಯನ ಕೈಗೊಳ್ಳಲಾಗಿದೆ. ಇಂದು ಸಂಜೆ ಜಿಲ್ಲೆಯ  ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಸಂಕಷ್ಟಕ್ಕೆ ಸಿಕ್ಕಿರುವ ರೈತರಿಗೆ ಜಿಲ್ಲಾಡಳಿತದಿಂದ ಸಾಧ್ಯವಿರುವ ನೆರವು ಕಲ್ಪಿಸಲಾಗುವುದು ಎಂದು ತಿಳಿಸಿದರು.

ಅಧಿಕಾರಿಗಳು ರೈತರ ಜಮೀನಿಗೆ ಬಾರದೆ ಕುಳಿತಲ್ಲೇ ವರದಿ ಕಳಿಸುತ್ತಾರೆ ಎನ್ನುವ ಆರೋಪಗಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರು ಆನ್ಲೈನ್ ಮೂಲಕವೇ ಬೆಳೆ ಹಾನಿ ಸಂಬಂಧ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆದರೂ ಅಧಿಕಾರಿ ಸಿಬ್ಬಂದಿಗಳು ರೈತರ ಜಮೀನಿಗೆ ಭೇಟಿ ನೀಡಬೇಕು. ಇಂತಹ ಪ್ರಕರಣಗಳಿದ್ದಲ್ಲಿ ಸ್ಥಳೀಯ ಶಾಸಕರು ಗಮನ ಹರಿಸುತ್ತಾರೆ ಎಂದು ಹೇಳಿದರು.

Chikkamagaluru: ಬಾಳೆಹೊನ್ನೂರಿನ ಸೇತುವೆ ನಿರ್ಮಾಣಕ್ಕೆ ತಂದಿಟ್ಟ ವಸ್ತುಗಳೇ ವೇಸ್ಟ್: ಕಾರಣವೇನು?

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಅನುದಾನ ಒದಗಿಸಲು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಕಳಿಸಿಕೊಟ್ಟಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಆಸಕ್ತಿ ವಹಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಎನ್ ಡಿ ಆರ್ ಎಸ್ ಅನುದಾನ ಬಂದ ನಂತರ ಅದರಲ್ಲಿಯೂ ರೈತರಿಗೆ ನೆರವು ಸಿಗಲಿದೆ ಎಂದು ಹೇಳಿದರು.

ಇದೇ ವೇಳೆ ರೈತರು ಮಳೆ ಕೊರತೆಯಿಂದಾಗಿ ಬಯಲು ಭಾಗದಲ್ಲಿ ರಾಗಿ ಮೆಕ್ಕೆಜೋಳ, ಆಲೂಗಡ್ಡೆ, ಈರುಳ್ಳಿ, ಹತ್ತಿ, ಸೂರ್ಯಕಾಂತಿ, ಶೇಂಗಾ, ಮೆಣಸಿನಕಾಯಿ ಇನ್ನಿತರೆ ಬೆಳೆಗಳು ಹಾನಿಗೀಡಾಗಿದೆ ಎಂದು ಅಳಲು ತೋಡಿಕೊಂಡರು. ಬೆಳೆ ಹಾನಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿಕೊಂಡರು.ಸಚಿವರೊಂದಿಗೆ ಶಾಸಕರುಗಳಾದ ಎಚ್. ಡಿ. ತಮ್ಮಯ್ಯ ಟಿ.ಡಿ.ರಾಜೇಗೌಡ, ಕೆ.ಎಸ್. ಆನಂದ್ ಹಾಗೂ ಜಿಲ್ಲಾಧಿಕಾರಿ ಸಿ. ಎನ್. ಮೀನಾ ನಾಗರಾಜ್, ಜಿ.ಪಂ. ಸಿಇಓ  ಡಾ. ಗೋಪಾಲಕೃಷ್ಣ ಕೃಷಿ ಇಲಾಖೆ ಜಂಟೀ ನಿರ್ದೇಶಕಿ ಸುಜಾತ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು ಸಚಿವರೊಂದಿಗೆ ಇದ್ದರು.

Follow Us:
Download App:
  • android
  • ios