Asianet Suvarna News Asianet Suvarna News

ಸಚಿವರಿಂದಲೇ ಬೆಂಗಳೂರಿನ ರಸ್ತೆ ಗುಂಡಿ ಬಗ್ಗೆ ತೀವ್ರ ಅಸಮಾಧಾನ..!

ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಬಿಬಿಎಂಪಿ ಅಥವಾ ಬಿಎಂಆರ್‌ಸಿಎಲ್‌ (ನಮ್ಮ ಮೆಟ್ರೋ) ಯಾರಾದರೂ ಆಗಲಿ ದಯವಿಟ್ಟು ಗುಂಡಿ ಮುಚ್ಚುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಪರಿಹಾರ ಮಾಡುವಂತೆ ಕೋರಿದ ಸಚಿವ ಕೃಷ್ಣ ಬೈರೇಗೌಡ 
 

minister Krishna Byre Gowda dissatisfaction about road potholes in bengaluru grg
Author
First Published Aug 16, 2024, 5:52 AM IST | Last Updated Aug 16, 2024, 5:52 AM IST

ಬೆಂಗಳೂರು(ಆ.16):  ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸಂಪುಟ ಸಚಿವ ಕೃಷ್ಣ ಬೈರೇಗೌಡ ಅವರಿಂದಲೇ ಅಸಮಾಧಾನ ವ್ಯಕ್ತಪಡಿಸಿದ್ದು, ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸಿದ್ದಾರೆ. ನಗರದ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗೆ ಸಾಗುವ ರಿಂಗ್‌ ರಸ್ತೆಯ ಸರ್ವಿಸ್‌ ರಸ್ತೆಯಲ್ಲಿನ ಗುಂಡಿಗಳ ಇರುವ ವಿಡಿಯೋವನ್ನು ಸಾರ್ವಜನಿಕರು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

ಸಚಿವರು ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಬಿಬಿಎಂಪಿ ಅಥವಾ ಬಿಎಂಆರ್‌ಸಿಎಲ್‌ (ನಮ್ಮ ಮೆಟ್ರೋ) ಯಾರಾದರೂ ಆಗಲಿ ದಯವಿಟ್ಟು ಗುಂಡಿ ಮುಚ್ಚುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಪರಿಹಾರ ಮಾಡುವಂತೆ ಕೋರಿದ್ದಾರೆ.

ರಸ್ತೆ ಗುಂಡಿ ದೂರು ಸಲ್ಲಿಸಲು ‘ಪೇಸ್‌ ಆ್ಯಪ್‌’: ಬಿಬಿಎಂಪಿಯಿಂದ ಅಭಿವೃದ್ಧಿ

ಸಚಿವರೇ ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದ ಮೂಲಕ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಪ್ರತಿ ಪಕ್ಷದ ನಾಯಕರು ಹಾಗೂ ಸಾರ್ವಜನಿಕರು ರಾಜ್ಯ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಲೇವಡಿ ಮಾಡಿದ್ದಾರೆ.

Latest Videos
Follow Us:
Download App:
  • android
  • ios