ಸಿಎಂ ಬಿಎಸ್‌ವೈ ಜತೆ ಅಸಮಾಧಾನ: ಈಶ್ವರಪ್ಪ ಪ್ರತಿಕ್ರಿಯೆ

ರಾಜ್ಯಪಾಲರಿಗೆ ಪತ್ರ ಬರೆಯೋದು ಸರಿಯಲ್ಲ| ಸಿಎಂ ಜತೆ ಈಶ್ವರಪ್ಪ ಚರ್ಚಿಸಬೇಕಿತ್ತು| ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡಬೇಕಿತ್ತು| ಈಗ ಚುನಾವಣೆ ಮೇಲೆ ಗಮನ ಹರಿಸಿದ್ದೇವೆ. ಬಳಿಕ ನಾವು ಈ ಪತ್ರದ ಬಗ್ಗೆ ಚರ್ಚೆ ಮಾಡುತ್ತೇವೆ: ಅರುಣ್‌ ಸಿಂಗ್‌| 

Minister KS Eshwarappa React on Letter to Governor Against CM BS Yediyurappa grg

ಶಿವಮೊಗ್ಗ(ಏ.02): ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿರುವ ವಿಚಾರದಲ್ಲಿ ವಿಶೇಷವೇನೂ ಇಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜತೆ ಯಾವುದೇ ಅಸಮಾಧಾನ ಇಲ್ಲ. ಅಸಮಾಧಾನವಾಗುವ ಪ್ರಶ್ನೆಯೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಕುರಿತು ರಾಜ್ಯಪಾಲರ ಜತೆ ಆಡಳಿತಾತ್ಮಕ ಚರ್ಚೆ ನಡೆಸಬೇಕಿತ್ತು. ಹೀಗಾಗಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಇದಕ್ಕೆ ಅಷ್ಟೊಂದು ಮಹತ್ವ ಕೊಡುವ ಅಗತ್ಯವೇನಿಲ್ಲ. ಪ್ರತಿ ಪಕ್ಷದ ಕೆಲವರು ಇದಕ್ಕೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ಅದಕ್ಕೆ ನಾನೇನು ಮಾಡಲಿ? ನಮ್ಮ ಇಲಾಖೆಯ ವಿಚಾರ ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು. ಅದನ್ನು ತಂದಿದ್ದೇನೆ ಅಷ್ಟೆ ಎಂದರು.

ನನ್ನ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವೆ ಯಾವುದೇ ಅಸಮಾಧಾನವಿಲ್ಲ. ಅಸಮಾಧಾನವಾಗುವ ಪ್ರಶ್ನೆಯೂ ಇಲ್ಲ. ಇಲಾಖೆಯ ವಿಚಾರ ಚರ್ಚಿಸಲು ರಾಜ್ಯಪಾಲರಷ್ಟೇ ಅಲ್ಲ, ಅಗತ್ಯವಿದ್ದರೆ ದೆಹಲಿಗೂ ಹೋಗುತ್ತೇನೆ ಎಂದರು.

ಸಿಎಂ ಈ ನಡೆ ನೋವು ತಂದಿದೆ; ಹೈಕಮಾಂಡ್‌ಗೆ ಈಶ್ವರಪ್ಪ ದೂರು

ಈಶ್ವರಪ್ಪ ನಡೆಗೆ ಅರುಣ್‌ ಸಿಂಗ್‌ ಅಸಮಾಧಾನ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯವೈಖರಿಯ ವಿರುದ್ಧ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ರಾಜ್ಯಪಾಲರಿಗೆ ಪತ್ರ ಬರೆದಿರುವುದಕ್ಕೆ ಕರ್ನಾಟಕದ ಉಸ್ತುವಾರಿ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಶ್ವರಪ್ಪ ಹಿರಿಯ ಸಚಿವರು. ಒಂದು ವೇಳೆ ಈಶ್ವರಪ್ಪ ಅವರಿಗೆ ಸಮಸ್ಯೆ ಇದ್ದರೆ ಅದನ್ನು ಅವರು ನೇರವಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಬಗೆಹರಿಸಿಕೊಳ್ಳಬೇಕಿತ್ತು. ರಾಜ್ಯಪಾಲರಿಗೆ ಪತ್ರ ಬರೆಯುವುದು ಸರಿಯಾದ ಕ್ರಮ ಅಲ್ಲ. ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡಬೇಕಿತ್ತು’ ಎಂದು ಹೇಳಿದರು. ‘ಈಗ ಚುನಾವಣೆ ಮೇಲೆ ಗಮನ ಹರಿಸಿದ್ದೇವೆ. ಬಳಿಕ ನಾವು ಈ ಪತ್ರದ ಬಗ್ಗೆ ಚರ್ಚೆ ಮಾಡುತ್ತೇವೆ’ ಎಂದು ಅವರು ನುಡಿದರು. ಇದೇ ವೇಳೆ ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯ ಕುರಿತು ಪ್ರತಿಕ್ರಿಯಿಸಿದ ಅವರು, ‘ಎಲ್ಲಾ ಮೂರು ಕ್ಷೇತ್ರಗಳಲ್ಲಿಯೂ ನಾವು ಗೆಲವು ಸಾಧಿಸಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದದರು.
 

Latest Videos
Follow Us:
Download App:
  • android
  • ios