Asianet Suvarna News Asianet Suvarna News

ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ : ವಿಶೇಷ ಭದ್ರತೆ

ಗ್ರಾಮೀಣ ಮತ್ತು ಪಂಚಾಯತ್ ರಾಜ್ ಸಚಿವ ಸಚಿವ ಕೆ ಎಸ್ ಈಶ್ವರಪ್ಪಗೆ ಜೀವ ಬೆದರಿಕೆ ಕರೆ ಮಾಡಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಮಾತನಾಡದಂತೆ ತಾಕೀತು ಮಾಡಲಾಗಿದೆ.

Minister KS Eshwarappa Receives Threat Call
Author
Bengaluru, First Published Jan 4, 2020, 9:10 AM IST
  • Facebook
  • Twitter
  • Whatsapp

ಶಿವಮೊಗ್ಗ [ಜ.04]: ಪಂಚಾಯತ್‌ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್‌. ಈಶ್ವರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಚೆನ್ನೈ ನಿಂದ ಅಪರಿಚಿತ ವ್ಯಕ್ತಿಯೋರ್ವ ಈಶ್ವರಪ್ಪನವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಆರಂಭದಲ್ಲಿ ವಿಮೆ ಕುರಿತು ಮಾತನಾಡಿದ್ದಾನೆ. ಆ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಮಾತನಾಡದಂತೆ ತಾಕೀತು ಮಾಡಿದ್ದಾನೆ. ಇದನ್ನು ಉಲ್ಲಂಘಿಸಿದಲ್ಲಿ ಜೀವ ತೆಗೆಯುವುದಾಗಿ ಬೆದರಿಕೆ ಒಡ್ಡಿದ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿದ್ದಾಗಿ ಈಶ್ವರಪ್ಪನವರ ಆಪ್ತರು ತಿಳಿಸಿದ್ದಾರೆ.

ಮೋದಿ ಭಾರತದ ಪ್ರಧಾನಿಯೋ ಪಾಕ್‌ ಪ್ರಧಾನಿಯೋ?'...

ಈ ವಿಷಯವನ್ನು ಈಶ್ವರಪ್ಪನವರ ಆಪ್ತ ಸಹಾಯಕ ಪೊಲೀಸರಿಗೆ ತಿಳಿಸಿದ್ದು, ಸಚಿವರಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ. ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ.

ಈ ಹಿಂದೆಯೂ ಕೂಡ ಅನೇಕ ಬಾರಿ ಸಚಿವ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಮಾಡಲಾಗಿತ್ತು. ಅಲ್ಲದೇ ಜೀವ ಬೆದರಿಕೆ ಒಡ್ಡಲಾಗಿತ್ತು. ಇದೀಗ ಮತ್ತೊಮ್ಮೆ ಅವರಿಗೆ ಕರೆ ಮಾಡಿ ಪ್ರಾಣ ಬೆದರಿಕೆ ಹಾಕಲಾಗಿದೆ. 

Follow Us:
Download App:
  • android
  • ios