ಬೆಂಗಳೂರು:(ಸೆ.20) ನಷ್ಟದ ಸುಳಿಯಲ್ಲಿರುವ ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ) ಮೇಲೆತ್ತಲು ಅಗತ್ಯ ಯೋಜನೆ ರೂಪಿಸುವಂತೆ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸೂಚಿಸಿದ್ದಾರೆ.

ಬಿಎಂಟಿಸಿ ಬಸ್‌, ನಿಲ್ದಾಣಕ್ಕೆ ಸಿಸಿ ಕ್ಯಾಮೆರಾ ಕಣ್ಗಾವಲು!

ಸಚಿವರಾದ ಬಳಿಕ ಮೊದಲ ಬಾರಿಗೆ ಗುರುವಾರ ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದ ಸಚಿವರು, ನಿಗಮದ ಆರ್ಥಿಕ ಪರಿಸ್ಥಿತಿ, ಬಸ್‌ ಸೇವೆ ಮೊದಲಾದ ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದೆ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಅವರು ಸಚಿವರಿಗೆ ನಿಗಮದ ಸದ್ಯದ ಸ್ಥಿತಿಗತಿ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ನಷ್ಟದ ಸುಳಿಯಲ್ಲಿರುವ ನಿಗಮವನ್ನು ಮೇಲೆತ್ತಲು ಅಗತ್ಯ ಯೋಜನೆ ರೂಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. 

ಬಿಎಂಟಿಸಿ ಬಳಿ ನೌಕರರ ಪಿಎಫ್‌ಗೂ ಹಣವಿಲ್ಲ!


ಮಾಲಿನ್ಯ ಉಂಟು ಮಾಡುವ ಡೀಸೆಲ್‌ ಬಸ್‌ಗಳಿಗೆ ಪರ್ಯಾಯವಾಗಿ ಎಲೆಕ್ಟ್ರಿಕ್‌ ಬಸ್‌ ಕಾರ್ಯಾಚರಣೆ ಕುರಿತಂತೆಯೂ ಸಚಿವರು ಚರ್ಚಿಸಿದ್ದಾರೆ. ನಿಗಮವನ್ನು ಉತ್ತಮ ಸ್ಥಿತಿಗೆ ಕೊಂಡೊಯ್ಯಲು ಎಲ್ಲರ ಸಹಕಾರ ಅತ್ಯಗತ್ಯವಾಗಿದೆ. ಹಾಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಅಧಿಕಾರಿಗಳಿಗೆ ಹೇಳಿದರು.