ತುಮಕೂರಲ್ಲಿ ಸರ್ಕಾರದಿಂದ ಗರ್ಭಿಣಿಯರಿಗೆ ಸೀಮಂತ: ಮಡಿಲು ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ತುಮಕೂರಿನ ಬಾಲಭವನದ ಆವರಣದಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮೊದಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಪಟಾಕಿ ಸಿಡಿಸಿ ಪೂರ್ಣ ಕುಂಭದ ಸ್ವಾಗತ ಕೋರಲಾಯಿತು.
ತುಮಕೂರು(ಸೆ.03): ನಗರದಲ್ಲಿ ಇಂದು(ಮಂಗಳವಾರ) ಸರ್ಕಾರದಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾಗವಹಿಸಿ ಮಡಿಲು ತುಂಬಿದ್ದಾರೆ. ಈ ಸಂದರ್ಭದಲ್ಲಿ ಮಗುವಿನ ಆಗಮನದಲ್ಲಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಕೋರಿದ್ದಾರೆ.
ತುಮಕೂರಿನ ಬಾಲಭವನದ ಆವರಣದಲ್ಲಿ ಇಂದು ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮೊದಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.ಪಟಾಕಿ ಸಿಡಿಸಿ ಪೂರ್ಣ ಕುಂಭದ ಸ್ವಾಗತ ಕೋರಲಾಯಿತು.
ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ವತಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಿಧ ಸವಲತ್ತುಗಳನನ್ ವಿತರಣೆ ಮಾಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಜಿಪಂ ಸಿಇಓ ಪ್ರಭು ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳು ಮಹಿಳೆಯರು ಸಾಥ್ ಕೊಟ್ಟಿದ್ದರು.