Asianet Suvarna News Asianet Suvarna News

ಅನ್ನದಾತರಿಗೆ ಸಂತಸದ ಸುದ್ದಿ: ರೈತರ ಜಮೀನು ಬಾಡಿಗೆ ಹೆಚ್ಚಳಕ್ಕೆ ಸಚಿವೆ ಹೆಬ್ಬಾಳಕರ ಸೂಚನೆ

ಸಚಿವರ ಸೂಚನೆಯಂತೆ ರೈತರಿಗೆ ಪ್ರತಿ ಗುಂಟೆಗೆ ₹3 ಸಾವಿರ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ರೈತರು ಜಮೀನಿನ ಬಾಡಿಗೆ ಹೆಚ್ಚಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದರು. ಸಚಿವರು ರೈತರ ಮನವಿಗೆ ಸ್ಪಂದಿಸಿದಂತಾಗಿದೆ.

Minister Lakshmi Hebbalkar Notice to Increase Farmers Land Rent in Belagavi grg
Author
First Published Dec 1, 2023, 3:00 AM IST

ಬೆಳಗಾವಿ(ಡಿ.01): ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ವಿಧಾನ ಮಂಡಳದ ಅಧಿವೇಶನದ ಸಂದರ್ಭದಲ್ಲಿ ನಡೆಯಲಿರುವ ವಿವಿಧ ಪ್ರತಿಭಟನೆಗಳಿಗೆ ಬಳಸಲಾಗುವ ರೈತರ ಕೃಷಿ ಜಮೀನಿನ ಬಾಡಿಗೆಯನ್ನು ಹೆಚ್ಚಳ ಮಾಡಲಾಗಿದೆ. ರೈತರ ಮನವಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಕಳೆದ ವರ್ಷ ಪ್ರತಿಭಟನೆಯ ಟೆಂಟ್ ನಿರ್ಮಾಣಕ್ಕೆ ಬಳಸಲಾಗಿದ್ದ ರೈತರ ಜಮೀನಿಗೆ ಪ್ರತಿ ಗುಂಟೆಗೆ ₹1200 ನೀಡಲಾಗಿತ್ತು. ಆ ಜಮೀನಿನಲ್ಲಿ ಯಾವುದೇ ಫಸಲು ಬೆಳೆದಿರಲಿಲ್ಲ. ಈ ಬಾರಿ ಹಲಗಾ ಗ್ರಾಮದ ರೈತರ 3.28 ಎಕರೆ ಜಮೀನನ್ನು ಪ್ರತಿಭಟನಾ ಟೆಂಟ್‌ಗಾಗಿ ಬಳಸಲಾಗುತ್ತಿದೆ. ಈ ಜಮೀನಿನಲ್ಲಿ ರೈತರು ಫಸಲು ಬೆಳೆದಿದ್ದರಿಂದ ಪ್ರತಿ ಗುಂಟೆಗೆ ₹3 ಸಾವಿರ ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದರು.

ತಾಯಿ ಸ್ಥಾನದಲ್ಲಿ‌ ನಿಂತು ನಿಮ್ಮ ಬೇಡಿಕೆ ಈಡೇರಿಸುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಸಚಿವರ ಸೂಚನೆಯಂತೆ ರೈತರಿಗೆ ಪ್ರತಿ ಗುಂಟೆಗೆ ₹3 ಸಾವಿರ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ರೈತರು ಜಮೀನಿನ ಬಾಡಿಗೆ ಹೆಚ್ಚಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದರು. ಸಚಿವರು ರೈತರ ಮನವಿಗೆ ಸ್ಪಂದಿಸಿದಂತಾಗಿದೆ.

Follow Us:
Download App:
  • android
  • ios