ಹಾಸನ [ಫೆ.28]:  ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಯಾವ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಆ ರೀತಿಯ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ನಗ​ರ​ದಲ್ಲಿ ಗುರು​ವಾರ ಸುದ್ದಿ​ಗಾ​ರ​ರೊಂದಿಗೆ ಮಾತ​ನಾ​ಡಿದ ಅವರು, ಹೋರಾಟಗಾರರ ದೊರೆಸ್ವಾಮಿ ಅವರ ಜೊತೆ ನಾನು ಅನೇಕ ಹೋರಾಟಗಳಲ್ಲಿ ಭಾಗವಹಿಸಿದ್ದೇನೆ. ಅವರ ಬಗ್ಗೆ ನನಗೆ ಅಪಾರ ಗೌರವ ಇದೆ ಎಂದಷ್ಟೇ ಹೇಳಿದರು. ಹಾಸನ ಜಿಲ್ಲಾಡಳಿತ ಸತ್ತಿದೆ. 

ದೊರೆಸ್ವಾಮಿ ನಾಲಿಗೆ ಬಿಗಿ ಹಿಡಿದು ಮಾತನಾಡಲಿ: ಸಚಿವ ಸೋಮಣ್ಣ.

ಖಾಸಗಿ ಲೇಔಟ್‌ದಾರರ ಹಾವಳಿ ಹೆಚ್ಚಾಗಿದೆ. ಜಿಲ್ಲೆಯ ಅಭಿವೃದ್ಧಿ ಅನುದಾನ ನೀಡುತ್ತಿಲ್ಲ ಎಂಬ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆರೋಪಕ್ಕೆ ಪ್ರತಿ​ಕ್ರಿ​ಯಿ​ಸಿ​ದ ಸಚಿವ ಮಾಧು​ಸ್ವಾಮಿ, ಈ ಬಗ್ಗೆ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂ​ದ​ರು.