Asianet Suvarna News Asianet Suvarna News

ಬೆಳಗಾವಿ ಅಧಿವೇಶನದಲ್ಲಿ ವಿಕಲಚೇತನರ ಪರ ದನಿ: ಚಲುವರಾಯಸ್ವಾಮಿ ಭರವಸೆ

ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿಕಲಚೇತರನರಿಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಕ್ರಮ ಕುರಿತು ಪೂರಕವಾದ ಉತ್ತರ ನೀಡಿ, ಹೆಚ್ಚಿನ ಸೌಲಭ್ಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.

Minister N Cheluvarayaswamy Talks Over Belagavi Session At Mandya gvd
Author
First Published Dec 4, 2023, 9:43 PM IST

ಮಂಡ್ಯ (ಡಿ.04): ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿಕಲಚೇತರನರಿಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಕ್ರಮ ಕುರಿತು ಪೂರಕವಾದ ಉತ್ತರ ನೀಡಿ, ಹೆಚ್ಚಿನ ಸೌಲಭ್ಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು. ಜಿಲ್ಲಾಡಳಿತದಿಂದ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯ ವಿಕಲಚೇತರನ ಸಂಘದ ಸಹಕಾರದೊಂದಿಗೆ ಜಿಲ್ಲಾ ಮಟ್ಟದ ಸಭೆ ನಡೆಸಿ ವಿಕಲಚೇತನ ಸೌಲಭ್ಯಗಳ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಸಂಸದನಾಗಿದ್ದಾಗ ವಿಕಲ ಚೇತನರಿಗೆ ಹೆಚ್ಚಿನ ಸೌಲಭ್ಯ ನೀಡಿದ್ದೇನೆ. ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾ ಪ್ರೋತ್ಸಾಹಧನ, ಆಧಾರ ಯೋಜನೆಯಡಿ ಸಾಲ ಸೌಲಭ್ಯ, ಶುಲ್ಕಮರುಪಾವತಿ, ಶಿಶುಪಾಲನಾ ಭತ್ಯೆ, ಕ್ರೀಡಾಪಟುಗಳಿಗೆ ಸಾಧನೆ ಯೋಜನೆಯಡಿ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ವಿಕಲಚೇತನ ಫಲಾನುಭವಿಗಳ ಖಾತೆಗಳಿಗೆ ಪಾವತಿಸಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಲಚೇತನರಿಗೆ ಸನ್ಮಾನ ಮಾಡಲಾಯಿತು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಮುನ್ಸೂಚನೆ: ಸಂಸದ ಮುನಿಸ್ವಾಮಿ

ಕಾರ್ಯಕ್ರಮದಲ್ಲಿ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಸಿಇಒ ಶೇಖ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರೋಹಿತ್, ಯುವ ಸಬಲೀಕರಣ ಮತ್ತು ಕ್ರೆಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೃಷಿಕರಲ್ಲಿ ಸಂತಸ ಮೂಡಿಸಿದ ಕೃಷಿಮೇಳ: ‘ಶ್ರೀ’ ಪದ್ಧತಿ ಭತ್ತದ ಬೇಸಾಯ ಪ್ರಾತ್ಯಕ್ಷಿಕೆ, ವಿವಿಧ ನೀರು ನಿರ್ವಹಣಾ ತಂತ್ರಜ್ಞಾನ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳ ಪ್ರದರ್ಶನ, ಸಿರಿಧಾನ್ಯ, ರಾಗಿ, ಸುಧಾರಿತ ಸಿರಿಧಾನ್ಯ ತಳಿಗಳ ಪ್ರಾತ್ಯಕ್ಷಿಕೆ ಸೇರಿದಂತೆ ಹತ್ತು ಹೈಬ್ರೀಡ್‌ ತಳಿಗಳು ಕೃಷಿ ಮೇಳಕ್ಕೆ ಆಗಮಿಸಿದ ಕೃಷಿಕರ ಮನಸೂರೆಗೊಂಡವು. 

ತಾಲೂಕಿನ ವಿ.ಸಿ.ಫಾರಂನ ವಲಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ ವಿ.ಸಿ.ಫಾರಂ ಸಹಯೋಗದಲ್ಲಿ ಆಯೋಜಿಸಿದ್ದ ಕೃಷಿ ಮೇಳದಲ್ಲಿ ಇವಿಷ್ಟೇ ಅಲ್ಲದೇ, ಸುಧಾರಿತ ತಳಿಗಳು, ಹೈಬ್ರಿಡ್‌ಗಳ ಪ್ರಾತ್ಯಕ್ಷಿಕೆ, ಏರೋಬಿಕ್ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳು, ನೂತನ ರಾಗಿ ತಳಿಗಳ ಪ್ರಾತ್ಯಕ್ಷಿಕೆ, ಮುಸುಕಿನ ಜೋಳದ ಹೈಬ್ರಿಡ್ ತಳಿಗಳ ಪ್ರಾತ್ಯಕ್ಷಿಕೆ, ಹತ್ತಿ, ಮುಸುಕಿನ ಜೋಳದಂತಹ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಎಲ್ಲರ ಗಮನಸೆಳೆದವು. ವಿವಿಧ ನೀರು ನಿರ್ವಹಣಾ ತಂತ್ರಜ್ಞಾನದ ಬಗ್ಗೆ ಪ್ರಾತ್ಯಕ್ಷಿಕೆಗಳು ರೈತರು, ಕೃಷಿ ವಿದ್ಯಾರ್ಥಿಗಳನ್ನು ಆಕರ್ಷಿಸಿದವು.

ಕೃಷಿ ಕಾಯ್ದೆ ಹಿಂಪಡೆಯದಿದ್ದರೆ ನಿರಂತರ ಹೋರಾಟ: ಕೋಡಿಹಳ್ಳಿ ಚಂದ್ರಶೇಖರ್

ಹುಲುಸಾಗಿ ಬೆಳೆದಿದ್ದ ಭತ್ತ, ಕಬ್ಬು, ಸಿರಿಧಾನ್ಯಗಳ ವಿವಿಧ ತಳಿಗಳ ಫಸಲು ನೋಡಿದ ಕೃಷಿಕರು ಬೆರಗಾದರು. ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ತಳಿಯ ಮಹತ್ವ, ದೊರೆಯುವ ಲಾಭದ ವಿವರಣೆ ಪಡೆದರು. ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗಳು ಹಾಗೂ ಕಾವೇರಿ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಮೇಳಕ್ಕೆ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹಾಗೂ ಶ್ರೀಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಾಲನೆ ನೀಡಿದರು.

Follow Us:
Download App:
  • android
  • ios