ಗದಗ, [ಆ.09]: ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದರೆ, ಇತ್ತ ಬೆಳಗಾವಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಯಲ್ಲಿ  ಬೆಳಗಾವಿಯಲ್ಲಿ ಎಲ್ಲ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. 

ಎಲ್ಲಾ ನದಿಗಳ ಪಾತ್ರದಲ್ಲಿ ಜಲಪ್ರಳಯವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ [ಶನಿವಾರ] ಬೆಳಗಾವಿಗೆ ಆಗಮಿಸಲಿದ್ದು ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ತಿಳಿಸಿದ್ದಾರೆ.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗದಗ ಜಿಲ್ಲೆಯ ಕೊಣ್ಣೂರು ಗ್ರಾಮದಲ್ಲಿ  ಇಂದು [ಶುಕ್ರವಾರ] ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ರಾಜ್ಯಕ್ಕೆ ಬರುತ್ತಿದ್ದಾರೆ. ಶನಿವಾರ ಬೆಳಗಾವಿ ಹಾಗೂ ಭಾನುವಾರ ಕೊಡಗಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದು, ಪ್ರವಾಹದಿಂದಾಗಿ ಆಗಿರುವ ಅನಾಹುತಗಳ ಬಗ್ಗೆ ಮಾಹಿತಿ ಪಡೆದು, ಕೇಂದ್ರಕ್ಕೆ ವಾಸ್ತವ ವರದಿ ನೀಡಿ ಅನುದಾನಕ್ಕೆ ಬೇಡಿಕೆ ಇಡಲಾಗುವುದು ಎಂದು ಸಿಎಂ ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮೀತ್​ ಶಾ ಅವರ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಸಮೀಕ್ಷೆ ಮಾಡಲು ಅವರು ನಾಳೆ ‌ಬೆಳಿಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ವಾಯು ಸೇನೆಯ ಹೆಲಿಕಾಪ್ಟರ್ ಮೂಲಕ ನೆರೆಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.