Asianet Suvarna News Asianet Suvarna News

'ಬಿ. ಎಸ್. ಯಡಿಯೂರಪ್ಪ ರಾಜ್ಯಕ್ಕೆ ದೇವರು ಇದ್ದ ಹಾಗೆ'

ಯಡಿಯೂರಪ್ಪ ನನ್ನ ಪಾಲಿಗೆ ಮಾತ್ರ ಅಲ್ಲ, ಇಡೀ ಜಿಲ್ಲೆಗೆ, ರಾಜ್ಯಕ್ಕೆ ದೇವರು|ಬೀದರ್‌ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಯಾಗಬೇಕು ಎಂಬುವುದು ಯಡಿಯೂರಪ್ಪ ಆಶಯ|ಮುಂದಿನ ವರ್ಷದ ರಾಜ್ಯಮಟ್ಟದ ಪಶು ಮೇಳ ಶಿವಮೊಗ್ಗ ಜಿಲ್ಲೆಯಲ್ಲಿ ಆಯೋಜನೆ|

Minister Prabhu Chauhan Talks Over CM BS Yediyurappa
Author
Bengaluru, First Published Feb 10, 2020, 9:14 AM IST

ಬೀದರ್‌(ಫೆ.10): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನನ್ನ ಪಾಲಿಗೆ ಮಾತ್ರ ಅಲ್ಲ, ಇಡೀ ಜಿಲ್ಲೆಗೆ, ರಾಜ್ಯಕ್ಕೆ ದೇವರು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 

ನಗರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಪಶು ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ತನ್ನೆಲ್ಲ ಬೇಡಿಕೆಗಳಿಗೆ ಯಡಿಯೂರಪ್ಪ ಅವರು ಸ್ಪಂದಿಸುತ್ತಾರೆ. ಬೀದರ್‌ ಜಿಲ್ಲೆ ಕೂಡ ಸರ್ವಾಂಗೀಣ ಅಭಿವೃದ್ಧಿಯಾಗಬೇಕು ಎಂಬುವುದು ಅವರ ಆಶಯವಾಗಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಈ ಜಿಲ್ಲೆಯ ನೆಲ ಕೂಡ ಪಶುಪಾಲನೆಗೆ ಹೇಳಿ ಮಾಡಿಸಿದಂತಿದೆ. ಈ ಭಾಗದ ದೇವಣಿ ತಳಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಅಂತೆಯೇ ಈ ಭಾಗದ ರೈತರಿಗೆ ಪಶುಪಲಾನೆಯ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ರಾಜ್ಯಮಟ್ಟದ ಪಶು ಮೇಳವನ್ನು ಜಿಲ್ಲೆಯಲ್ಲಿ ನಡೆಸಲು ತೀರ್ಮಾನಿಸಿ, ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಸಿದ್ದು, ನಮಗೆ ಖುಷಿ ತಂದಿತು. ಮುಂದಿನ ವರ್ಷದ ರಾಜ್ಯಮಟ್ಟದ ಪಶು ಮೇಳವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ. 

ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಈ ಜಿಲ್ಲೆಯ ನೆಲ ಕೂಡ ಪಶುಪಾಲನೆಗೆ ಹೇಳಿ ಮಾಡಿಸಿದಂತಿದೆ. ಈ ಭಾಗದ ದೇವಣಿ ತಳಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಅಂತೆಯೇ ಈ ಭಾಗದ ರೈತರಿಗೆ ಕೃಷಿ ಜೊತೆಗೆ ಪಶುಪಾಲನೆಯನ್ನು ಮಾಡಲು ಅನುಕೂಲವಾಗಬೇಕು ಎಂದು ಅವರಿಗೆ ಪಶುಪಲಾನೆಯ ಬಗ್ಗೆ ಮಾಹಿತಿಯನ್ನು ನೀಡುವ ನಿಟ್ಟಿನಲ್ಲಿ ರಾಜ್ಯಮಟ್ಟದ ಪಶು ಮೇಳವನ್ನು ಜಿಲ್ಲೆಯಲ್ಲಿ ನಡೆಸಲು ತೀರ್ಮಾನಿಸಿ, ಮೂರು ದಿನಗಳ ಕಾಲ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿದ್ದುದು ನಮಗೆ ಖುಷಿ ತಂದಿತು ಎಂದು ಸಚಿವರು ತಿಳಿಸಿದರು.

ಪಶುಮೇಳದಲ್ಲಿ ಮಾಹಿತಿ:

ಜಾನುವಾರು ಸಾಕಾಣಿಕೆ, ನಿರ್ವಹಣೆಯ ಬಗ್ಗೆ ಮಾಹಿತಿ ಇದ್ದಲ್ಲಿ ಪಶುಗಳ ಪಾಲನೆಯನ್ನು ಸುಗಮವಾಗಿ ಮಾಡಬಹುದಾಗಿದೆ. ಹೀಗಾಗಿ ಈ ಪಶು ಮೇಳದಲ್ಲಿ ಹಸು, ಎಮ್ಮೆ, ಕುರಿ, ಮೇಕೆ, ಹಂದಿ, ಮೊಲ, ಗಿರಿರಾಜ, ಸ್ವರ್ಣ ಧರ ಸೇರಿದಂತೆ ವಿವಿಧ ಕೋಳಿ ತಳಿಗಳ ಸಾಕಾಣಿಕೆ ಮತ್ತು ನಿರ್ವಹಣೆಯನ್ನು ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ನೀಡಲು ವ್ಯವಸ್ಥೆ ಮಾಡಲಾಗಿತ್ತು ಎಂದರು.

ಜಾನುವಾರು ಆರೋಗ್ಯವು ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ ಪಶು ಮೇಳದಲ್ಲಿ ಜಾನುವಾರು ಔಷಧಿ, ಲಸಿಕೆ ಮತ್ತು ರೋಗ ಪತ್ತೆ ಸಾಧನಗಳ ಮಾಹಿತಿಗೆ ಅವಕಾಶ ಕಲ್ಪಿಸಲಾಗಿತ್ತು, ಹಾಲು ಮಾಂಸ ಮತ್ತು ಉಣ್ಣೆ ಉತ್ಪನ್ನಗಳ ಮಾಹಿತಿ ಮತ್ತು ಮಾರಾಟಕ್ಕೂ ಕೂಡ ಅವಕಾಶ ಕಲ್ಪಿಸಲಾಗಿತ್ತು. ಇಂತಹ ಕಾರ್ಯಕ್ರಮಗಳ ಮೂಲಕ ಪಶು ಮೇಳ ವಿಶೇಷ ಆಕರ್ಷಣೆಯಾಗಿತ್ತು ಎಂದು ಸಚಿವರು ತಿಳಿಸಿದರು.

ಸಾಹಸದ ಕಾರ್ಯ:

ನಾಡಿನ ಗಡಿ ಪ್ರದೇಶ ಬೀದರ್‌ನಲ್ಲಿ ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಸವಾಲಾಗಿ ತೆಗೆದುಕೊಂಡು ಮಾಡಲಾಯಿತು. ಪಶುಪಾಲನಾ ಇಲಾಖೆಯ ಅಧಿಕಾರಿಗಳು, ಪಶು ವೈದ್ಯಾಧಿಕಾರಿಗಳು ಮತ್ತು ಇಲಾಖೆಯ ಎಲ್ಲ ಸಿಬ್ಬಂದಿಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಮತ್ತು ಇನ್ನಿತರ ಇಲಾಖೆಗಳ ಪರಸ್ಪರ ಸಹಕಾರದಿಂದ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸಿರುವುದು ದಾಖಲೆಯಾಗಿದೆ ಎಂದರು.

ಕರುಗಳ ಪ್ರದರ್ಶನ, ಹೈನು ರಾಸುಗಳ ಹಾಲು ಕರೆಯುವ ಸ್ಪರ್ಧೆ, ಶ್ವಾನ ಪ್ರದರ್ಶನ, ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನ, ಕೃಷಿ ಇಲಾಖೆಯ ಜಲಾನಯನ ಪ್ರಾತ್ಯಕ್ಷಿಕೆ ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆಗಳು ಮತ್ತು ವಾಣಿಜ್ಯ ಮಳಿಗೆಗಳಿಗೆ ಕೂಡ ಜನರು ಕಿಕ್ಕಿರಿದು ಸೇರಿದ್ದರು. ಹೀಗೆ ಪಶು ಮೇಳವು ಮನೆ ಮನವನ್ನು ತಲುಪಿದ್ದು ಸಂತಸ ತಂದಿದೆ ಎಂದು ಸಚಿವರು ತಿಳಿಸಿದರು.

ಮುಂದಿನ ಪಶು ಮೇಳ ಶಿವಮೊಗ್ಗದಲ್ಲಿ:

ಮುಂದಿನ ವರ್ಷದ ರಾಜ್ಯಮಟ್ಟದ ಪಶು ಮೇಳವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಆಯೋಜಿಸಲಾಗುವುದು ಎಂದು ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಘೋಷಿಸಿದರು.

ಈ ಸಂದರ್ಭದಲ್ಲಿ ಸಂಸದ ಭಗವಂತ ಖೂಬಾ, ತಾಪಂ ಅಧ್ಯಕ್ಷ ವಿಜಯಕುಮಾರ ರಾಮುಲು ಬರೂರ್‌, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರಾದ ಎಸ್‌ಆರ್‌ ನಟೇಶ್‌, ನಿರ್ದೇಶಕ ಡಾ. ಎಂಟಿ ಮಂಜುನಾಥ, ಜಿಲ್ಲಾಧಿಕಾರಿ ಡಾ. ಎಚ್‌ಆರ್‌ ಮಹಾದೇವ್‌, ಜಿಪಂ ಸಿಇಓ ಗ್ಯಾನೇಂದ್ರಕುಮಾರ ಗಂಗವಾರ, ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಚ್‌ಡಿ ನಾರಾಯಣಸ್ವಾಮಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ಗಾಯಕ ಹನುಮಂತ ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು.

Follow Us:
Download App:
  • android
  • ios