Tumakuru: ಆರ್. ಅಶೋಕ್ ಗ್ರಾಮ ವಾಸ್ತವ್ಯ: ಇಂದು - ನಾಳೆ ಸಾರ್ವಜನಿಕರ ಸಮಸ್ಯೆ ಆಲಿಸಲಿರುವ ಸಚಿವರು
ಜಿಲ್ಲೆಯ ತುರುವೇಕೆರೆ ತಾಲೂಕು ಮಾಯಸಂದ್ರದಲ್ಲಿ ಇಂದು ಮತ್ತು ನಾಳೆ ಕಂದಾಯ ಸಚಿವ ಆರ್.ಅಶೋಕ್ ಗ್ರಾಮವಾಸ್ತವ್ಯ ಹೂಡಲಿದ್ದು, ಗ್ರಾಮಸ್ಥರ ಸಮಸ್ಯೆಗಳಿಗೆ ಕಿವಿಗೊಡಲಿದ್ದಾರೆ.
ತುಮಕೂರು (ಜೂ.18): ಜಿಲ್ಲೆಯ ತುರುವೇಕೆರೆ ತಾಲೂಕು ಮಾಯಸಂದ್ರದಲ್ಲಿ ಇಂದು ಮತ್ತು ನಾಳೆ ಕಂದಾಯ ಸಚಿವ ಆರ್.ಅಶೋಕ್ ಗ್ರಾಮವಾಸ್ತವ್ಯ ಹೂಡಲಿದ್ದು, ಗ್ರಾಮಸ್ಥರ ಸಮಸ್ಯೆಗಳಿಗೆ ಕಿವಿಗೊಡಲಿದ್ದಾರೆ. ಜೂ. 18, 19 ರಂದು ಕಾರ್ಯಕ್ರಮ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ' ನಡೆಯಲಿದ್ದು ಸಚಿವರು ಜನರ ಸಮಸ್ಯೆಗಳನ್ನು ಆಲಿಸಿ, ಆದಷ್ಟು ಸ್ಥಳದಲ್ಲೇ ಪರಿಹರಿಸುವ ಮೂಲಕ ಜನರ ಮನೆಬಾಗಿಲಿಗೆ ಕಂದಾಯ ಸೇವೆ ಒದಗಿಸಲಿದ್ದಾರೆ. ಶನಿವಾರ ಬೆಳಗ್ಗೆ 11ಕ್ಕೆ ಸಚಿವರನ್ನು ಸ್ವಾಗತಿಸಲು ಗ್ರಾಮಸ್ಥರು ಸಜ್ಜಾಗಿದ್ದಾರೆ. 11.30 ರಿಂದ 12 ರವರೆಗೆ ಆರೋಗ್ಯ ಶಿಬಿರ ಹಾಗೂ 12ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ರಿಂದ 2 ರವರೆಗೆ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಧ್ಯಾಹ್ನ 2 ಗಂಟೆಗೆ ಗ್ರಾಮಸ್ಥರೊಂದಿಗೆ 8 ರವರೆಗೆ ಸಚಿವರು ಭೋಜನ ಸವಿಯಲಿದ್ದಾರೆ.
ಸಂಜೆ 5 ರಿಂದ 6 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ , 6.30 ರಿಂದ 7.30 ಗ್ರಾಮಸಭೆ, 7.30 ರಿಂದ 9 ಸಾಂಸ್ಕೃತಿಕ ಕಾರ್ಯಕ್ರಮ, 9 ರಿಂದ 10 ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ರಾತ್ರಿ ಊಟ, 10 ಗಂಟೆಗೆ ವಿಶ್ರಾಂತಿಗೆ ತೆರಳಲಿದ್ದಾರೆ. ಭಾನುವಾರ ಬೆಳಗ್ಗೆ 7 ರಿಂದ ಸ್ಥಳೀಯ ಮುಖಂಡರ ಜತೆ ಸಚಿವರು ಗ್ರಾಮ ವಿಹಾರ ನಡೆಸಲಿದ್ದು, ಗ್ರಾಮಸ್ಥರೊಂದಿಗೆ ಸಂವಾದ ನಡೆಸುವರು. ನಂತರ ಹರಿಜನರ ಮನೆಯಲ್ಲಿ ಬೆಳಗಿನ ಉಪಹಾರ ಸೇವಿಸಿ ಅಲ್ಲಿಂದ ನಿರ್ಗಮಿಸಲಿದ್ದು, ಜಿಲ್ಲಾಡಳಿತ, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಸ್ಥಳೀಯರಾದ ನೂತನ ರಾಜ್ಯಸಭಾ ಸದಸ್ಯ ಜಗ್ಗೇಶ್, ಶಾಸಕ ಮಸಾಲಾ ಜಯರಾಂ ಸಚಿವರಿಗೆ ಸಾಥ್ ನೀಡಲಿದ್ದಾರೆ.
Grama Vastavya: 72 ಗಂಟೆಯಲ್ಲಿ ಪಿಂಚಣಿ ಪತ್ರ, ದೇಶದಲ್ಲೇ ಕರ್ನಾಟಕ ಮೊದಲು: ಅಶೋಕ್
ಶೀಘ್ರ ಭೂ ಪರಿವರ್ತನೆ ಕಾಯ್ದೆ ತಿದ್ದುಪಡಿ: ಮುಂಬರುವ ದಿನಗಳಲ್ಲಿ ಭೂ ಪರಿವರ್ತನೆ ಕಾಯ್ದೆ (ಎನ್‌ಎ) ತಿದ್ದುಪಡಿ ಮಾಡಿ ಜನಸ್ನೇಹಿಯಾಗಿಸಿ ದಲ್ಲಾಳಿ ಮುಕ್ತವಾಗಿಸುವ ಸ್ವಯಂ ಘೋಷಣಾ ಕಾನೂನು ಜಾರಿಗೆ ಜಾರಿಗೆ ತರುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ ಘೋಷಿಸಿದ್ದಾರೆ. ಆಡಳಿತ ಯಂತ್ರವನ್ನು ಜನರ ಬಳಿಗೆ ಕೊಂಡೊಯ್ಯುವ ಸಲುವಾಗಿ ತಾವೇ ಪ್ರಾರಂಭಿಸಿರುವ ಮಹತ್ವಾಕಾಂಕ್ಷಿ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆಗೆ’ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಬೀದರ್ ಜಿಲ್ಲೆಯ ವಡಗಾಂವ ದೇಶಮುಖ ಗ್ರಾಮದಲ್ಲಿ ಚಾಲನೆ ನೀಡಿದ ಅವರು ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಶಾಸಕ ರಾಜೂಗೌಡ ಡ್ಯಾನ್ಸ್‌ಗೆ ಅಶೋಕ್ ಫಿದಾ, ವೇದಿಕೆಗೆ ಹೋಗಿ ಸ್ಟೆಪ್ ಹಾಕಿದ ಸಚಿವ
ಕಂದಾಯ ಇಲಾಖೆಯ ಕಾಯ್ದೆಗಳನ್ನು ಸರಳೀಕರಣಗೊಳಿಸುವ ಪ್ರಕ್ರಿಯೆ ನಡೆಸುತ್ತಿದ್ದು, ಈಗಾಗಲೇ ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆ ನೀಡುತ್ತಿದೆ. ಹಾಗೇ ಸ್ವಯಂ ಪೋಡಿ (11ಇ ಸ್ಕೆಚ್) ಕಾನೂನು ಸರಳೀಕರಣ ಮಾಡಿದಂತೆ ಕೃಷಿಯೇತರ ಜಮೀನಿಗೆ ಅರ್ಜಿ ಸಲ್ಲಿಸುವವರು ಅಧಿಕಾರಿಗಳ ಅನುಮೋದನೆಗಾಗಿ ವರ್ಷಗಟ್ಟಲೆ ಕಾಯುವ ವ್ಯವಸ್ಥೆಯಿಂದ ಮುಕ್ತಗೊಳಿಸಲು ಯೋಜಿಸಿದ್ದೇವೆ ಎಂದರು. ಕೃಷಿಯೇತರ ಜಮೀನಿಗೆ ಅರ್ಜಿ ಸಲ್ಲಿಸುವವರು ಕೇವಲ ಸ್ವಯಂ ಘೋಷಣಾ ಪತ್ರ ನೀಡಬೇಕು. ಅದನ್ನು ಪರಿಶೀಲಿಸುವ ಜಿಲ್ಲಾಧಿಕಾರಿಗಳು ಈ ಜಮೀನು ಸರ್ಕಾರದ ಸ್ವತ್ತಲ್ಲ ಎಂದು ಭೂಪರಿವರ್ತನೆ ಆದೇಶ ನೀಡಬೇಕು. ಒಂದು ವೇಳೆ ಸ್ವಯಂ ಘೋಷಣಾ ಪತ್ರ ಸುಳ್ಳಾಗಿದ್ದು ಕಂಡುಬಂದಲ್ಲಿ ಆದೇಶ ರದ್ದಾಗಿ ಸರ್ಕಾರಕ್ಕೆ ಕಟ್ಟಿರುವ ಶುಲ್ಕ ಮುಟ್ಟುಗೋಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.