Asianet Suvarna News Asianet Suvarna News

ಮಂಚೇನಹಳ್ಳಿಯಲ್ಲಿ ಮಿನಿ ವಿಧಾನಸೌಧ ನಿರ್ಮಾಣ: ಸಚಿವ ಅಶೋಕ್‌ ಘೋಷಣೆ

ಜಿಲ್ಲೆಯಲ್ಲಿ ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲೂಕು ಕೇಂದ್ರದಲ್ಲಿ ಆಡಳಿತ ಸೌಧ ನಿರ್ಮಾಣಕ್ಕೆ 15 ಕೋಟಿ ಅನುದಾನ ನೀಡುವುದಾಗಿ ಕಂದಾಯ ಸಚಿವ ಆರ್‌.ಅಶೋಕ್‌ ಘೋಷಿಸಿದರು. 

minister r ashok grama vastavya program at chikkaballapur gvd
Author
First Published Nov 27, 2022, 8:04 PM IST

ಚಿಕ್ಕಬಳ್ಳಾಪುರ (ನ.27): ಜಿಲ್ಲೆಯಲ್ಲಿ ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲೂಕು ಕೇಂದ್ರದಲ್ಲಿ ಆಡಳಿತ ಸೌಧ ನಿರ್ಮಾಣಕ್ಕೆ 15 ಕೋಟಿ ಅನುದಾನ ನೀಡುವುದಾಗಿ ಕಂದಾಯ ಸಚಿವ ಆರ್‌.ಅಶೋಕ್‌ ಘೋಷಿಸಿದರು. ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಬರಬಂಡಹಳ್ಳಿ ಗ್ರಾಮದಲ್ಲಿ ಶನಿವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಮಹತ್ತರವಾದ ಸುಧಾರಣೆ ತರುವಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸಹಾಯಕವಾಗಿದೆ ಎಂದರು.

826 ಎಕೆರೆ ಭೂಮಿ ಮಂಜುರಾತಿ: ಅಲ್ಲದೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 22 ಸಾವಿರ ಮಂಚಿಗೆ ಉಚಿತ ಸೈಟು ವಿತರಿಸಲು 826 ಎಕರೆ ಜಮೀನು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆಕಿಸಿ ಕೊಡುವುದಾಗಿ ಪ್ರಕಟಿಸಿ ಶೀಘ್ರದಲ್ಲಿಯೆ ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಿಸುವುದಾಗಿ ಅಶೋಕ್‌ ಘೋಷಿಸಿದರು. ರೈತರ ಮೇಲೆ ಭೂ ಕಬಳಿಕೆ ಆರೋಪ ಹೊರೆಸಿ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗದಂತೆ ಕಾನೂನುಗೆ ತಿದ್ದುಪಡಿ ತರಲಾಗಿದೆಂದ ಅವರು, ಗ್ರಾಮ ವಾಸ್ತವ್ಯ ನನಗೆ ಒಂದು ರೀತಿ ಪಾಠ ಶಾಲೆ ಇದ್ದಂತೆ. ಮತ ಹಾಕಿದ ಜನ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವಾಗ ಅವರಿಗೆ ಸ್ಪಂದಿಸಬೇಕಾದದು ಜನಪ್ರತಿನಿದಿಗಳು ಕರ್ತವ್ಯ. ಸ್ಥಳದಲ್ಲಿಯೆ ರೈತರಿಗೆ ಪರಿಹಾರ ಕಲ್ಪಿಸಬೇಕೆಂದು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ನನ್ನನ್ನು ಸೋಲಿಸಿಬಿಟ್ಟರು: ಕಣ್ಣೀರಿಟ್ಟ ಸಚಿವ ಎಂಟಿಬಿ ನಾಗರಾಜ್‌

ಕಚೇರಿಗೆ ಅಲೆದಾಟ ಪದ್ಧತಿ ನಿಲ್ಲಲಿ: ರೈತರು, ವಿಕಲಚೇನರು, ಮಹಿಳೆಯರು ಯಾವುದೇ ಕಾರಣಕ್ಕೂ ಅಂಗನವಾಡಿ ಬೇಕು, ಪಿಂಚಣಿ, ಸ್ಮಶಾನ, ಬೇಕು ಅಂತ ಅಥವ ಖಾತೆ, ಪೌತಿ ಖಾತೆಗೆ ಅರ್ಜಿ ಹಿಡಿದು ಕಚೇರಿಗಳಿಗೆ ಸುತ್ತಾಡುವ ಪದ್ಧತಿ ತೊಲಗಬೇಕಿದೆ. ಅಧಿಕಾರಿಗಳು ಜನ ಸೇವಕರಾಗಬೇಕು. ಸರ್ಕಾರದ ಸೌಲಭ್ಯಗಳು ಜನರ ಮನೆ ಬಾಗಿಲಿಗೆ ತಲುಪಿಸಬೇಕು, ಈ ದಿಕ್ಕಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಸ್ಥಳದಲ್ಲಿಯೆ ಸಮಸ್ಯೆಗಳಿಗೆ ಪರಿಹಾರ ಸೂಚಿವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯದಲ್ಲಿ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುತ್ತಿದೆ. ಇಲ್ಲಿವರೆಗೂ ಗ್ರಾಮ ವಾಸ್ತವ್ಯದಲ್ಲಿ 71,172 ಅರ್ಜಿಗಳಿಗೆ ಸ್ಥಳದಲ್ಲಿಯೆ ಪರಿಹಾರ ಕಲ್ಪಿಸಲಾಗಿದೆ ಎಂದರು.

ಗ್ರಾಮಗಳಲ್ಲಿ ಹಬ್ಬದ ಸಡಗರ: ಸಚಿವರ ಗ್ರಾಮ ವಾಸ್ತವ್ಯದಿಂದಾಗಿ ಜರಬಂಡಹಳ್ಳಿ, ಹನುಮಂತಪುರ, ನಲುಗುಮ್ಮನಹಳ್ಳಿ ಗ್ರಾಮಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಗ್ರಾಮದ ಮುಖ್ಯ ಬೀದಿಗಳ ತಳಿರು, ತೋರಣಗಳಿಂದ ಸಿಂಗಾರಗೊಂಡು ಹಬ್ಬದ ಸಂಭ್ರಮ ಮೂಡಿ ಬಂತು. ಡೀಸಿಯಿಂದ ಹಿಡಿದು ಜಿಪಂ ಸಿಇಒ, ಎಸ್ಪಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರ ಸಮಸ್ಯೆ, ಆಹವಾಲಿಗಳನ್ನು ಆಲಿಸಿ ಸ್ಥಳದಲ್ಲಿ ಪರಿಹಾರ ಕಲ್ಪಿಸುವ ಕಾರ್ಯ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್‌.ಎಮ್‌.ನಾಗರಾಜ್‌, ಹಿಪಂ ಸಿಇಒ ಪಿ.ಶಿವಶಂಕರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ್‌, ಉಪ ವಿಭಾಗಾಧಿಕಾರಿ ಡಾ.ಸಂತೋಷ್‌ ಕುಮಾರ್‌, ಚಿಕ್ಕಬಳ್ಳಾಪುರ ನಗರ ಸಭೆ ಅಧ್ಯಕ್ಷ ಆನಂದ ರೆಡ್ಡಿ ಬಾಬು, ಜರಬಂಡಹಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಾಥ್‌ ಬಾಬು, ಗೌರಿಬಿದನೂರು ತಹಸೀಲ್ದಾರ್‌ ಶ್ರೀನಿವಾಸ್‌ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

JDS Pancharatna Rathayatra: ಬಸವರಾಜ ಬೊಮ್ಮಾಯಿ ಹೆಬ್ಬೆಟ್ಟು ಸಿಎಂ: ಹೆಚ್‌.ಡಿ.ಕುಮಾರಸ್ವಾಮಿ

ಎತ್ತಿನ ಬಂಡಿಯಲ್ಲಿ ಮೆರವಣಿಗೆ: ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸ ತಾಲೂಕು ಮಂಚೇನಹಳ್ಳಿ ವ್ಯಾಪ್ತಿಗೆ ಬರುವ ಜರಬಂಡಹಳ್ಳಿಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ ಕಂದಾಯ ಸಚಿವ ಆರ್‌.ಅಶೋಕ್‌ಗೆ ಅದ್ದೂರಿ ಸ್ವಾಗತ ಸಿಕ್ಕಿತು. ಜರಬಂಡಹಳ್ಳಿ ಪ್ರವೇಶಕ್ಕೂ ಮುನ್ನ ನುಲುಗುಮ್ಮನಹಳ್ಳಿಯಲ್ಲಿ ಕಳಶ ಹೊತ್ತ ಮಹಿಳೆಯರು ಪೂರ್ಣಕುಂಭ ಸ್ವಾಗತ ನೀಡಿದರೆ ವೀರಗಾಸೆ, ಡೊಳ್ಳು ಕುಣಿತ ಕಲಾವಿದರು ಮೆರವಣಿಗೆ ಕಳೆ ತಂದರು. ಬಳಿಕ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೇ ವೆಂಕಟರವಣಸ್ವಾಮಿ ದೇವರ ದರ್ಶನ ಪಡೆದು ಅಲ್ಲಿಂದ ಎತ್ತಿನಬಂಡಿಯಲ್ಲಿ ಜರಬಂಡಹಳ್ಳಿ ಗ್ರಾಮ ವಾಸ್ತವ್ಯ ವೇದಿಕೆವರೆಗೂ ಮೆರವಣಿಗೆಯಲ್ಲಿ ಆಗಮಿಸಿದರು. ಸಚಿವ ಡಾ.ಕೆ.ಸುಧಾಕರ್‌ ಹಾಗೂ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ಆರ್‌.ಅಶೋಕ್‌ಗೆ ಸಾಥ್‌ ನೀಡಿದರು.

Follow Us:
Download App:
  • android
  • ios