* ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಇನ್ನೂ 20 ವರ್ಷ ಕಳೆದರೂ ಅಧಿಕಾರಕ್ಕೆ ಬರಲ್ಲ * ಚುನಾವಣೆಗೂ ಮುನ್ನವೇ ನಾಯಕರು ಸಿಎಂ ಸ್ಥಾನದ ಬಗ್ಗೆ ತಿರುಕನ ಕನಸು ಕಾಣುತ್ತಿದ್ದಾರೆ * ದೇಶದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನಾಯಕರೇ ಇಲ್ಲ

ಕೊರಟಗೆರೆ(ಜೂ.26): ದೇಶದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನಾಯಕರೇ ಇಲ್ಲ. ರಾಹುಲ್‌ ಗಾಂಧಿಯ ಹೆಸರೇಳಿಕೊಂಡು ಚುನಾವಣೆಗೆ ಹೋದರೆ ಕೇವಲ ನಾಲ್ಕು ಓಟು ಸಹ ಬೀಳುವುದಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಟೀಕಿಸಿದ್ದಾರೆ. 

ನಿನ್ನೆ(ಶುಕ್ರವಾರ) ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಚುನಾವಣೆಗೂ ಮುನ್ನವೇ ನಾಯಕರು ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್‌ಗೆ ಪಕ್ಷದ ಅಧ್ಯಕ್ಷರೇ ಸುಪ್ರೀಂ: ಸಿದ್ದರಾಮಯ್ಯ ಬಣಕ್ಕೆ ಪರಂ ಟಾಂಗ್

ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಇನ್ನೂ 20 ವರ್ಷ ಕಳೆದರೂ ಅಧಿಕಾರಕ್ಕೆ ಬರಲ್ಲ ಎಂದು ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.