Asianet Suvarna News Asianet Suvarna News

ಡಿಕೆಶಿ ಹತಾಶೆಯಿಂದ ಮಾತನಾಡುತ್ತಿದ್ದಾರೆ: ಸಚಿವ ಜಾರಕಿಹೊಳಿ

ಉಪಚುನಾವಣೆ ವೇಳೆಯಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಯಡಿಯೂರಪ್ಪನವರ ಮೇಲೆ ಕೂಡ ಪ್ರಕರಣ ದಾಖಲಾಗಿತ್ತು. ಆದರೆ, ಈಗ ಆರ್‌.ಆರ್‌. ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಕುಸುಮಾ ಮೇಲೆ ಪ್ರಕರಣ ದಾಖಲಾಗಿದ್ದಕ್ಕೆ ಡಿ.ಕೆ.ಶಿವಕುಮಾರ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಅದು ಚುನಾವಣೆ ಪ್ರಕ್ರಿಯೆ ಅದನ್ನು ನಿಭಾಯಿಸಬೇಕು ಎಂದ ಜಾರಕಿಹೊಳಿ 

Minister Ramesh Jarakiholi Talks over D K Shivakumar grg
Author
Bengaluru, First Published Oct 17, 2020, 2:40 PM IST

ಬೆಳಗಾವಿ(ಅ.17): ರಾಜ್ಯದಲ್ಲಿ ನಡೆಯುತ್ತಿರುವ ಆರ್‌.ಆರ್‌.ವಿಧಾನಸಭಾ ಉಪಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಮ್ಮದೆ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. 

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ಉಪಚುನಾವಣೆ ವೇಳೆಯಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಸಿಎಂ ಯಡಿಯೂರಪ್ಪನವರ ಮೇಲೆ ಕೂಡ ಪ್ರಕರಣ ದಾಖಲಾಗಿತ್ತು. ಆದರೆ, ಈಗ ಆರ್‌.ಆರ್‌. ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಕುಸುಮಾ ಅವರ ಮೇಲೆ ಪ್ರಕರಣ ದಾಖಲಾಗಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಅದು ಚುನಾವಣೆ ಪ್ರಕ್ರಿಯೆ ಅದನ್ನು ನಿಭಾಯಿಸಬೇಕು ಎಂದು ಹೇಳಿದ್ದಾರೆ. 

ರಮೇಶ್‌ ಜಾರಕಿಹೊಳಿ ಬಂದ ಬಳಿಕ ನಾನು ಸೈಡ್‌ಲೈನ್‌ ಆಗಿಲ್ಲ: ಸಚಿವ ಶ್ರೀರಾಮುಲು

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‌ ಚುನಾವಣೆ ಪಕ್ಷಾತೀತವಾಗಿ ನಡೆಯುವಂಥದ್ದು, ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ನಿರ್ಣಯವೇ ಅಂತಿಮ ಎಂದರು.

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಸಂಜಯ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
 

Follow Us:
Download App:
  • android
  • ios