ಬೆಳಗಾವಿ(ನ.07): ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. 

ಶುಕ್ರ​ವಾರ ಮಾತ​ನಾ​ಡಿದ ಅವರು, ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ, ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಪುನರುಚ್ಚರಿಸಿದರು.

ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಪ್ರಮೋದ್ ಮುತಾಲಿಕ್

ವಿನಯ ಕುಲಕರ್ಣಿ ತಪ್ಪು ಮಾಡಿಲ್ಲ ಎಂದು ಕಾನೂನು ಹೋರಾಟ ಮಾಡಿ ಗೆಲವು ಸಾಧಿಸಲಿ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತನಾಡುವ ಅಗತ್ಯ ಇಲ್ಲ ಎಂದರು.