ಬೆಳಗಾವಿ(ಜು.26): ಕೊರೋನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಲೀಗಲ್‌ ನೋಟಿಸ್‌ ನೀಡಲು ಮುಖ್ಯಮಂತ್ರಿಗಳು ಸಿದ್ಧತೆ ನಡೆಸಿದ್ದಾರೆಂದು ಜಲ ಸಂಪ​ನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿ​ಸಿ​ದ್ದಾರೆ. 

ಶನಿವಾರ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತ​ನಾ​ಡಿದ ಅವರು, ಕೊರೋನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಈ ಕುರಿತು ಈಗಾಗಲೇ ನಮ್ಮ ಐವರು ಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ.

ರಮೇಶ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ: ವಿಶ್ವನಾಥ್‌, ಯೋಗೇಶ್ವರ್‌ ಸಚಿವ ಸ್ಥಾನದ ಬಗ್ಗೆ ಚರ್ಚೆ

ಬೆಂಗಳೂರಿನ ನನ್ನ ನಿವಾಸದಲ್ಲಿ ಶುಕ್ರವಾರ ರಾತ್ರಿ ಯಾವುದೇ ಸಭೆ ನಡೆಸಿಲ್ಲ. ಎಚ್‌.ವಿಶ್ವನಾಥ್‌ ವಿಧಾನ ಪರಿಷತ್‌ ಸದಸ್ಯರಾಗಿದ್ದಕ್ಕೆ ಸಂತೋಷವಾಗಿದೆ. ಸಂಪುಟ ವಿಸ್ತರಣೆ ಪರಮಾಧಿಕಾರ ಸಿಎಂಗೆ ಇದೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬುವುದನ್ನು ಹೈಕಮಾಂಡ್‌ ನಿರ್ಧರಿಸಲಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದರು.

ಬಿಮ್ಸ್‌ ಎದುರು ಆ್ಯಂಬುಲೆನ್ಸ್‌ಗೆ ಬೆಂಕಿ ಹಚ್ಚಿದ ಪ್ರಕರಣದ ಕುರಿತು ಸಿಎಂ ಅವರೊಂದಿಗೆ ಚರ್ಚಿಸಿದ್ದೇನೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.