Asianet Suvarna News Asianet Suvarna News

ಸರ್ಕಾರ ಅನಗತ್ಯ ಗೊಂದಲ ಮಾಡುತ್ತಿದೆ : ರಮೇಶ್ ಜಾರಕಿಹೊಳಿ

ಸರ್ಕಾರ ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುತ್ತಿದೆ. ಈ ನಡೆ ಶೋಭೆ ತರುವಂತದ್ದಲ್ಲ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂತಹ ನಡೆ ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. 

Minister Ramesh Jarkiholi slams Maharashtra Govt  snr
Author
Bengaluru, First Published Jan 19, 2021, 8:34 AM IST

ಬೆಳಗಾವಿ (ಜ.19): ಬೆಳಗಾವಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. 

ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಾಜನ್‌ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. 

ಜಾರಕಿಹೊಳಿ‌- ಶಶಿಕಲಾ ಜೊಲ್ಲೆ ಮಧ್ಯೆ ಮುಸುಕಿನ ಗುದ್ದಾಟ..?

ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ ಕೆರಳಿಸುವ ಯತ್ನ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯದ ಒಂದಿಂಚೂ ಜಾಗ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿಯ ಉದ್ಧಟತನ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಕನ್ನಡ ನಾಡಿನ ನೆಲ, ಜಲ ಮತ್ತು ಭಾಷೆಯ ರಕ್ಷಣೆಗೆ ನಾವು ಕಟಿಬದ್ಧರಾಗಿದ್ದೇವೆ ಎಂದು ತಿಳಿಸಿದರು.

Follow Us:
Download App:
  • android
  • ios