ಮೈಸೂರು(ಅ.03): ವಿವಿಧ ಸಹಕಾರ ಕ್ಷೇತ್ರಗಳ ಮೈಸೂರು ವಿಭಾಗದ ಸುಮಾರು 8600 ಕೋಟಿ ಸಾಲ ನೀಡಲು ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ಯೋಜನೆ ರೂಪಿಸಲಾಗಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ಕೋವಿಡ್‌​- 19ರ ಸಂದರ್ಭದಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮ ಮಾಡಬೇಕು ಎಂಬುದು ಮುಖ್ಯಮಂತ್ರಿಗಳ ಉದ್ದೇಶವಾಗಿದೆ. ಈಗಾಗಲೇ ಬೆಂಗಳೂರು ವಿಭಾಗಕ್ಕೆ ಚಾಲನೆ ನೀಡಲಾಗಿದೆ. ಆತ್ಮನಿರ್ಭರ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಯಡಿ 39,300 ಕೋಟಿ ಹಣವನ್ನು ಆರ್ಥಿಕ ಸ್ಪಂದನದ ಮೂಲಕ ರೈತರು, ವ್ಯಾಪಾರಸ್ಥರು, ಸ್ವಸಹಾಯ ಸಂಘಗಳು, ಹಾಲು ಉತ್ಪಾದಕ ಸಂಘಗಳು, ಸಣ್ಣ - ದೊಡ್ಡ ಉದ್ದಿಮೆಗಳಿಗೆ ಸಾಲ ನೀಡಲಾಗುತ್ತಿದೆ. ಇದೊಂದು ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ಮಾಜಿ ಸಹಕಾರ ಸಚಿವ, ಶಾಸಕ ಜಿ.ಟಿ. ದೇವೇಗೌಡ, ಶಾಸಕ ಎಸ್‌.ಎ. ರಾಮದಾಸ್‌ ಮಾತನಾಡಿದರು.

ರೈತರಿಗೆ ಸಾಲದ ಮಿತಿ ಹೆಚ್ಚಿಸಲು ಚಿಂತನೆ: ಸಚಿವ ಸೋಮಶೇಖರ್‌

ಆತ್ಮನಿರ್ಭರ ಯೋಜನೆಯಡಿ ಹಮ್ಮಿಕೊಳ್ಳಲಾಗಿರುವ ಆರ್ಥಿಕ ಸ್ಪಂದನ ಕಾರ್ಯಕ್ರಮದ ಪ್ರಯುಕ್ತ ಸಹಕಾರ ಪತ್ರಿಕೆ ಹೊರತಂದ ವಿಶೇಷ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು.  ಬಳಿಕ ಸಹಕಾರ ಕ್ಷೇತ್ರ ನಡೆದುಬಂದ ಹಾದಿ ಬಗ್ಗೆ ಕಿರು ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಲಾಯಿತು. ಮೈಸೂರು ವಿಭಾಗದ 8 ಜಿಲ್ಲೆಗಳ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸಾಲದ ಚೆಕ್‌ ವಿತರಿಸಲಾಯಿತು. ಶಾಸಕ ಎಲ್‌ ನಾಗೇಂದ್ರ, ಎಂಡಿಎ ಅಧ್ಯಕ್ಷ ಎಚ್‌.ವಿ. ರಾಜೀವ್‌ ಇದ್ದರು.